Home ಟಾಪ್ ಸುದ್ದಿಗಳು ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ವಸಂತ ಬಂಗೇರ ಹೆಸರಿಡಲು ಸರ್ಕಾರ ಸಿದ್ದ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ವಸಂತ ಬಂಗೇರ ಹೆಸರಿಡಲು ಸರ್ಕಾರ ಸಿದ್ದ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳ್ತಂಗಡಿ : ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ವಸಂತ ಬಂಗೇರ ಅವರ ಹೆಸರಿಡಲು ಸರ್ಕಾರ ಸಿದ್ದವಿದೆ. ಜೊತೆಗೆ ಅವರ ಪ್ರತಿಮೆ ನಿರ್ಮಿಸಿ ವೃತ್ತದಲ್ಲಿ ಸ್ಥಾಪಿಸಬೇಕು ಎನ್ನುವ ಬೇಡಿಕೆಗೂ ಸರ್ಕಾರ ಸ್ಪಂದಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.


ಮಾಜಿ ಮುಖ್ಯ ಸಚೇತಕ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.


ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ ಸ್ನೇಹಿತರಾಗಿದ್ದರು. ಇವರ ಅಗಲಿಕೆ ನನಗೆ ಅಪಾರ ದುಃಖ ತಂದಿದೆ ಎಂದರು.
ಸತ್ಯ, ಬಡವರ ಪರ ಕಾಳಜಿ, ರಾಜಿ ರಹಿತ ಜನಪರ ಕೆಲಸಗಳ ಮೂಲಕ ತಮ್ಮ ವೈಯುಕ್ತಿಕ ಮತ್ತು ರಾಜಕೀಯ ಜೀವನವನ್ನು ಸಾರ್ಥಕಗೊಳಿಸಿ ಕೊಂಡವರು ಬಂಗೇರ ಅವರು ಜನ ಮಾನಸದಲ್ಲಿ ಶಾಶ್ವತವಾಗಿ ಉಳಿಯಲಿದ್ದಾರೆ ಎಂದರು.

Join Whatsapp
Exit mobile version