ಈ ವರ್ಷ ಸರ್ಕಾರಿ ಶಾಲಾ ಪ್ರವೇಶಾತಿ 1.62 ಲಕ್ಷಕ್ಕೆ ಇಳಿಕೆ

Prasthutha|

ನವ ದೆಹಲಿ: 2021-22ರ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲೆಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ 1.62 ಲಕ್ಷದಷ್ಟು ಕುಸಿದಿದೆ ಹಾಗೂ ಖಾಸಗಿ ಶಾಲಾ ಪ್ರವೇಶವು 1.66 ಲಕ್ಷದಷ್ಟು ಹೆಚ್ಚಾಗಿದೆ ಎಂದು ವರದಿಯೊಂದು ತಿಳಿಸಿದೆ.

- Advertisement -

ಆದರೆ ಇತ್ತೀಚಿಗೆ  ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ರಾಜ್ಯದಲ್ಲಿ 2021-22ನೇ ಸಾಲಿನಲ್ಲಿ ಎಲ್ಲ ಮಾದರಿಯ ಶಾಲೆ, ಪಿಯು ಕಾಲೇಜುಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಏರಿಕೆಯಾಗಿದೆ. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಾಗಿದ್ದು, ಖಾಸಗಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಕಡಿಮೆಯಾಗಿದೆ ಎಂಬ ಮಾಹಿತಿಯನ್ನು ನೀಡಲಾಗಿತ್ತು.

ಆದರೆ ಸಾರ್ವಜನಿಕ ಶಿಕ್ಷಣ ಇಲಾಖೆಯ ವಿವರಗಳು ಸರಕಾರದ ಮಾಹಿತಿಗೆ ತದ್ವಿರುದ್ಧವಾಗಿದೆ.  

- Advertisement -

ಖಾಸಗಿ ಶಾಲೆಗಳು ಈ ಶೈಕ್ಷಣಿಕ ವರ್ಷದಲ್ಲಿ 44.66 ಲಕ್ಷ ಪ್ರವೇಶಗಳನ್ನು ಕಂಡಿವೆ. ಇದು ಕಳೆದ ವರ್ಷದ 42.99 ಲಕ್ಷದಿಂದ ಹೆಚ್ಚಾಗಿದೆ. ಸರ್ಕಾರಿ ಶಾಲೆಗಳಲ್ಲಿ ಈ ಬಾರಿ 45.41 ಲಕ್ಷ ಪ್ರವೇಶ ಪಡೆದಿದ್ದು, ಕಳೆದ ವರ್ಷ 47.04 ಲಕ್ಷಕ್ಕೆ ಇಳಿದಿದೆ.

ಕೋವಿಡ್ -19 ಸಮಯದಲ್ಲಿ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸ್ಥಳಾಂತರಿಸಿದ ಕುಟುಂಬಗಳು, ಆರ್ಥಿಕ ತೊಂದರೆಗಳನ್ನು ನೀಗಿಸಿ ತಮ್ಮ ಮಕ್ಕಳನ್ನು ಮತ್ತೆ ಖಾಸಗಿ ಶಾಲೆಗಳಿಗೆ ಸೇರಿಸಿವೆ.

ಕಳೆದ ವರ್ಷ ಪ್ರಾಥಮಿಕ ತರಗತಿಗಳಿಗೆ  ಪ್ರವೇಶ ಪಡೆದವರಲ್ಲಿ ಕನಿಷ್ಠ ನಾಲ್ಕು ವಿದ್ಯಾರ್ಥಿಗಳು ಈ ವರ್ಷ ಶಾಲೆಯಿಂದ ಹೊರಗುಳಿದಿದ್ದಾರೆ ಎಂದು ಬೆಂಗಳೂರು ದಕ್ಷಿಣದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳಿಂದ ಖಾಸಗಿ ಶಾಲೆಗಳಿಗೆ ಹೋಗಲು ಪ್ರಮುಖ ಕಾರಣಗಳಲ್ಲಿ ಒಂದು ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಸರ್ಕಾರದ ವೈಫಲ್ಯವಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಖಾಸಗಿ ಶಾಲೆಗಳಿಂದ ಬಂದ ಮಕ್ಕಳನ್ನು ಉಳಿಸಿಕೊಳ್ಳಲು ರಚನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ. ಹಲವಾರು ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳು, ಶಿಕ್ಷಕರು ಮತ್ತು ಗುಣಮಟ್ಟದ ಕೊರತೆಯಿದೆ. ಕೋವಿಡ್ ಕಾರಣದ  ಆರ್ಥಿಕ ಬಿಕ್ಕಟ್ಟಿನಂತಹ ಕೆಲವು ಅನಿವಾರ್ಯತೆಯಿಂದಾಗಿ ಕೆಲವು ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಿಗೆ ದಾಖಲಾಗಿದ್ದಾರೆ ಎಂದು ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ ಹೇಳಿದ್ದಾರೆ.

Join Whatsapp