ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ ಸರಕಾರಿ ಶಾಲೆಯ ಶಿಕ್ಷಕ ಅಮಾನತು

Prasthutha|

ಬರ್ವಾನಿ:  ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ ಸರಕಾರಿ ಶಾಲೆಯ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

ಭಾರತ್ ಜೋಡೋ ಯಾತ್ರೆಯು ಮಧ್ಯಪ್ರದೇಶ ತಲುಪಿದ್ದು, ಯಾತ್ರೆಯಲ್ಲಿ ಭಾಗವಹಿಸಿದ ಬುಡಕಟ್ಟು ಜನಾಂಗದ ರಾಜೇಶ್ ಕನ್ನೋಜೆ ಎಂಬ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.  

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಮಾಧ್ಯಮ ವಿಭಾಗದ ಅಧ್ಯಕ್ಷ ಕೆ.ಕೆ. ಮಿಶ್ರಾ, ಶಿವರಾಜ್ ಸಿಂಗ್ ಚೌಹಾಣ್ ಸರಕಾರವು ಆರ್‌ಎಸ್‌ಎಸ್ ಶಾಖೆಗಳಲ್ಲಿ ಭಾಗವಹಿಸಲು ನೌಕರರಿಗೆ ಅವಕಾಶ ನೀಡಿದೆ, ಆದರೆ ರಾಹುಲ್ ಗಾಂಧಿಯವರಿಗೆ ರಾಜಕೀಯೇತರ ಮೆರವಣಿಗೆಯಲ್ಲಿ ‘ತಿರ್-ಕಾಮನ್’ (ಬಿಲ್ಲು ಮತ್ತು ಬಾಣ) ಉಡುಗೊರೆ ನೀಡಿದ ಶಿಕ್ಷಕನನ್ನು ಅಮಾನತು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Join Whatsapp