Home ಟಾಪ್ ಸುದ್ದಿಗಳು ಹಸಿದವರಿಗೆ ಅನ್ನ ನೀಡದ ಸರ್ಕಾರ ಜನದ್ರೋಹಿ ಸರ್ಕಾರವೆಂದು ಕರೆಸಿಕೊಳ್ಳುತ್ತದೆ: ಕೇಂದ್ರದ ವಿರುದ್ಧ ರಾಜ್ಯಪಾಲ ಪರೋಕ್ಷ ಅಸಮಾಧಾನ

ಹಸಿದವರಿಗೆ ಅನ್ನ ನೀಡದ ಸರ್ಕಾರ ಜನದ್ರೋಹಿ ಸರ್ಕಾರವೆಂದು ಕರೆಸಿಕೊಳ್ಳುತ್ತದೆ: ಕೇಂದ್ರದ ವಿರುದ್ಧ ರಾಜ್ಯಪಾಲ ಪರೋಕ್ಷ ಅಸಮಾಧಾನ

ಬೆಂಗಳೂರು: ಹಸಿದವರಿಗೆ ಅನ್ನ ನೀಡದ ಸರ್ಕಾರ ಜನದ್ರೋಹಿ ಸರ್ಕಾರವೆಂದು ಕರೆಸಿಕೊಳ್ಳುತ್ತದೆ ಎಂದು ರಾಜಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.


ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, 10 ದಿನಗಳ ಕಾಲ ಈ ಅಧಿವೇಶನ ನಡೆಯಲಿದೆ. ಸೋಮವಾರ ಅಧಿವೇಶನಕ್ಕೆ ಹಾಜರಾದ ರಾಜಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನ ಹೂಗುಚ್ಛ ನೀಡಿ ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದರು. ಈ ವೇಳೆ ಕಾನೂನು ಮಂತ್ರಿ ಹೆಚ್.ಕೆ ಪಾಟೀಲ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ನಂತರ ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲರು ಮಾತನಾಡಿದರು.


ಕಳೆದ 34 ವರ್ಷಗಳಲ್ಲಿ ಯಾರಿಗೂ ಇಷ್ಟು ದೊಡ್ಡ ಬಹುಮತ ಸಿಕ್ಕಿರಲಿಲ್ಲ. ಯಾರಿಗೂ ನೀಡದ ಬಹುಮತದೊಂದಿಗೆ ಜನ ಈ ಸರ್ಕಾರವನ್ನ ಆಯ್ಕೆ ಮಾಡಿದ್ದಾರೆ. ಹಾಗಾಗಿ ಜನಕೇಂದ್ರಿತ ಅರ್ಥ ವ್ಯವಸ್ಥೆ, ಜನಕೇಂದ್ರಿತ ಶಾಸನಗಳನ್ನ ಈ ಸರ್ಕಾರ ಜಾರಿಗೊಳಿಸುತ್ತೆ. ಎಲ್ಲ ಸಮುದಾಯಗಳ ಜೊತೆಗೆ ಅಭಿವೃದ್ಧಿ ಹಾದಿಯಲ್ಲಿ ಕೊಂಡೊಯ್ಯುವ ಮೂಲಕ ಸೌಹಾರ್ದಯುತ ಸಂದೇಶವನ್ನ ಸರ್ಕಾರ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆಗಳ ಮೂಲಕ ಇದನ್ನ ಸಾಧಿಸಲು ಹೊರಟಿದೆ. ಇದರ ಅನುಷ್ಠಾನವನ್ನ ಶ್ರದ್ಧೆಯಿಂದ ಸರ್ಕಾರ ಮಾಡಲಿದೆ. ಹಸಿದವರಿಗೆ ಅನ್ನ ನೀಡದ ಸರ್ಕಾರ ಅತ್ಯಂತ ಜನದ್ರೋಹಿ ಸರ್ಕಾರ ಎಂದು ಕರೆಸಿಕೊಳ್ಳುತ್ತದೆ ಎಂದು ಅಸಮಾಧಾನ ಹೊರಹಾಕಿದರು. ಈ ಮೂಲಕ ಪರೋಕ್ಷವಾಗಿ ಕೇಂದ್ರ ಸರ್ಕಾರಕ್ಕೆ ಟಾಂಗ್ ಕೊಟ್ಟರು.

Join Whatsapp
Exit mobile version