‘ಗ್ಯಾರಂಟಿ ಯೋಜನೆ’ ಫಲಾನುಭವಿಗಳ ಸಮೀಕ್ಷೆಗೆ ಮುಂದಾದ ಸರ್ಕಾರ

Prasthutha|

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿ ಯೋಜನೆಗಳು ಸರಿಯಾಗಿ ಜನರಿಗೆ ತಲುಪಿದೆಯೇ, ಗ್ಯಾರಂಟಿ ಯೋಜನೆಗಳ ಸದುಪಯೋಗ ಆಗಿದೆಯೇ ಎಂಬುದನ್ನು ತಿಳಿಯಲು ಸಮೀಕ್ಷೆ ಮಾಡಲು ತೀರ್ಮಾನಿಸಲಾಗಿದೆ.

- Advertisement -

ಚುನಾವಣಾ ಪೂರ್ವ ಭರವಸೆಯಂತೆ ಕಾಂಗ್ರೆಸ್ ಆದಧಿಕಾರಕ್ಕೇರಿದ ಬಳಿಕ ಬಡವರ ಹಾಗೂ ದುರ್ಬಲ ವರ್ಗದವರ ಕಲ್ಯಾಣಕ್ಕಾಗಿ 5 ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ ಯೋಜನೆ, ಯುವನಿಧಿ ಯೋಜನೆ, ಗೃಹಜ್ಯೋತಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಗಳನ್ನು ಜಾರಿಗೆ ತಂದಿದೆ. ರಾಜ್ಯದ ಪ್ರತಿ ಮನೆ ಮನೆಗೂ ಈ 5 ಗ್ಯಾರಂಟಿ ಯೋಜನೆಗಳು ಸರಿಯಾದ ರೀತಿಯಲ್ಲಿ ತಲುಪಿವೆಯೇ ಎಂಬ ಬಗ್ಗೆ ರಾಜ್ಯ ವ್ಯಾಪ್ತಿ ಸಮೀಕ್ಷೆ ಮಾಡಲು ‘ಗ್ಯಾರಂಟಿ ಸ್ವಯಂ-ಸೇವಕ’ರನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ.

ಗ್ಯಾರಂಟಿ ಯೋಜನೆಗಳು ಸರಿಯಾದ ರೀತಿಯಲ್ಲಿ ಫಲಾನುಭವಿಗಳಿಗೆ ತಲುಪಿರುವ ಕುರಿತಂತೆ ಮನೆ ಮನೆಗಳಿಗೆ ತೆರಳಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಇಲಾಖೆಗಳ ಸಿಬ್ಬಂದಿ ಸಮೀಕ್ಷೆ ಮಾಡಬೇಕು. ಎಲ್ಲ ಸಿಬ್ಬಂದಿ ಸೇರಿ 1.2 ಲಕ್ಷ ‘ಗ್ಯಾರಂಟಿ ಸ್ವಯಂ ಸೇವಕ’ರಿಂದ 10 ರಿಂದ 15 ದಿನಗಳ ಅವಧಿಯಲ್ಲಿ ಸಮೀಕ್ಷೆ ನಡೆಸಬೇಕು. ಈ ಸ್ವಯಂ ಸೇವಕರಿಗೆ 1000 ರೂ.ನಂತೆ ಪ್ರೋತ್ಸಾಹಧನ ನೀಡಲಾಗುತ್ತದೆ. ರಾಜ್ಯ ವ್ಯಾಪ್ತಿ ಸಮೀಕ್ಷೆ ನಡೆಸಲು ಸರ್ಕಾರದಿಂದ ತಾತ್ವಿಕ ಅನುಮೋದನೆ ನೀಡಲಾಗಿದೆ.



Join Whatsapp