Home ಟಾಪ್ ಸುದ್ದಿಗಳು ವಿನೇಶ್ ಫೋಗಟ್ ಗೆ 4 ಕೋಟಿ ರೂ. ಬಹುಮಾನ: ಬೆಳ್ಳಿ ಪದಕ ವಿಜೇತೆ ಮಾದರಿಯಲ್ಲಿ ಗೌರವಿಸಲು...

ವಿನೇಶ್ ಫೋಗಟ್ ಗೆ 4 ಕೋಟಿ ರೂ. ಬಹುಮಾನ: ಬೆಳ್ಳಿ ಪದಕ ವಿಜೇತೆ ಮಾದರಿಯಲ್ಲಿ ಗೌರವಿಸಲು ಮುಂದಾದ ಸರ್ಕಾರ

ಚಂಡೀಗಢ: ಪ್ಯಾರಿಸ್ ಒಲಿಂಪಿಕ್ಸ್ ಫೈನಲ್ ಪಂದ್ಯಕ್ಕೂ ಮುನ್ನವೇ ಅನರ್ಹಗೊಂಡು ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಫೋಗಟ್ ಅವರಿಗೆ ಹರಿಯಾಣ ಸರ್ಕಾರ 4 ಕೋಟಿ ರೂ. ಬಹುಮಾನ ಘೋಷಿಸಿದೆ.


ಇದರೊಂದಿಗೆ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಮಾದರಿಯಲ್ಲೇ ಸ್ವಾಗತ ಕೋರಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.


ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಫೋಗಟ್ ಫೈನಲ್ ಅನರ್ಹ ನಂತರ ಭಾರೀ ದುಃಖ ವ್ಯಕ್ತಪಡಿಸಿದ್ದಾರೆ.


ಈ ಕುರಿತು ಎಕ್ಸ್ ಖಾತೆಯಲ್ಲಿ ಹರಿಯಾಣ ಸಿಎಂ ನಯಾಬ್ ಸಿಂಗ್ ಸೈನಿ ಮಾಹಿತಿ ಹಂಚಿಕೊಂಡಿದ್ದಾರೆ. ಒಲಿಂಪಿಕ್ಸ್ ಫ್ರೀಸ್ಟೈಲ್ ಕುಸ್ತಿ ವಿಭಾಗದಲ್ಲಿ ಫೈನಲ್ ತಲುಪಿ ಇತಿಹಾಸ ನಿರ್ಮಿಸಿದ ವಿನೇಶ್ ಫೋಗಟ್ ಅವರನ್ನು ತವರಿನಲ್ಲಿ ಬೆಳ್ಳಿ ಪದಕ ವಿಜೇತರಾಗಿ ಗೌರವಿಸಲಾಗುವುದು ಎಂದು ಅವರು ಬರೆದುಕೊಂಡಿದ್ದಾರೆ.


ಹರಿಯಾಣದ ಧೈರ್ಯಶಾಲಿ ಮಗಳು ವಿನೇಶ್ ಫೋಗಟ್ ಒಲಿಂಪಿಕ್ಸ್ ನಲ್ಲಿ ಅದ್ಭುತ ಪ್ರದರ್ಶನ ನೀಡಿ ಫೈನಲ್ ಗೆ ತಲುಪಿದ್ದರು. ಆದ್ರೆ ಕಾರಣಾಂತರದಿಂದ ಫೈನಲ್ ಪಂದ್ಯದಲ್ಲಿ ಸ್ಪರ್ಧಿಸಲು ಸಾಧ್ಯವಾಗಲಿಲ್ಲ. ಆದಾಗ್ಯೂ ಅವರು ನಮಗೆಲ್ಲ ಚಾಂಪಿಯನ್ ಆಗಿದ್ದಾರೆ. ಹಾಗಾಗಿ ಪದಕ ವಿಜೇತರಂತೆಯೇ ವಿನೇಶ್ ರನ್ನ ಗೌರವಿಸುವ ನಿರ್ಧಾರವನ್ನ ನಮ್ಮ ಸರ್ಕಾರ ತೆಗೆದುಕೊಂಡಿದೆ. ಬೆಳ್ಳಿ ಪದಕ ವಿಜೇತರಿಗೆ ಸಮಾನವಾಗಿ ಗೌರವಿಸುತ್ತದೆ, ಜೊತೆಗೆ ಬೆಳ್ಳಿ ಪದಕ ವಿಜೇತರಿಗೆ ಸರ್ಕಾರ ನೀಡುವ ಪ್ರಶಸ್ತಿ ಮತ್ತು ಸೌಲಭ್ಯಗಳನ್ನೂ ಫೋಗಟ್ ಅವರಿಗೆ ಕೃತಜ್ಞತೆಯಿಂದ ನೀಡಲಾಗುತ್ತದೆ. ವಿನೇಶ್, ನಿಮ್ಮ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Join Whatsapp
Exit mobile version