ಸಿಜೆಐ ಲಲಿತ್ ಗೆ ಉತ್ತರಾಧಿಕಾರಿಯನ್ನು ಹೆಸರಿಸಲು ಸರ್ಕಾರ ಸೂಚನೆ

Prasthutha|

ನವದೆಹಲಿ: ನವೆಂಬರ್ 8ರಂದು ನಿವೃತ್ತರಾಗಲಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರ ಉತ್ತರಾಧಿಕಾರಿಯ ಹೆಸರನ್ನು ಸೂಚಿಸುವಂತೆ ಕೇಂದ್ರ ಸರ್ಕಾರ ಕೇಳಿಕೊಂಡಿದೆ.

- Advertisement -

ಶುಕ್ರವಾರ ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇಮಕಾತಿಯ ಕಾರ್ಯವಿಧಾನದ (ಎಂಒಪಿ) ಪ್ರಕಾರ, ಕಾನೂನು ಮತ್ತು ನ್ಯಾಯ ಸಚಿವರು ತಮ್ಮ ಉತ್ತರಾಧಿಕಾರಿಯ ನೇಮಕಕ್ಕಾಗಿ ತಮ್ಮ ಶಿಫಾರಸುಗಳನ್ನು ಕಳುಹಿಸಲು ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದಾರೆ.

ಆಗಸ್ಟ್ 27 ರಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಲಲಿತ್ ಅವರ ನಿವೃತ್ತಿಗೆ ಕೇವಲ ಒಂದು ತಿಂಗಳು ಮಾತ್ರ ಬಾಕಿ ಇದೆ.




Join Whatsapp