ಆರೋಗ್ಯ ಕ್ಷೇತ್ರಕ್ಕೆ 30 ಸಾವಿರ ಕೋಟಿ ರುಪಾಯಿ ಮೀಸಲಿಡಬೇಕು: ಡಿ.ಕೆ. ಶಿವಕುಮಾರ್

Prasthutha|

ಕೊರೋನಾ ಎರಡನೇ ಅಲೆ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಕ್ಷೇತ್ರಕ್ಕೆ 30 ಸಾವಿರ ಕೋಟಿ ರುಪಾಯಿ ಮೀಸಲಿಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

- Advertisement -

ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ದಿನೇ ದಿನೇ ಗಂಭೀರವಾಗುತ್ತಿದೆ. ಸೋಂಕಿತರಿಗೆ ಬೆಡ್ ಗಳು ಸಿಗುತ್ತಿಲ್ಲ. ಐಸಿಯು, ರೆಮ್ ಡಿಸಿವಿಯರ್ ಲಸಿಕೆ, ಆಮ್ಲಜನಕ ಅಭಾವ ಸೃಷ್ಟಿಯಾಗಿವೆ. ಪ್ರತಿ ವಿಚಾರದಲ್ಲೂ ಪರಿಸ್ಥಿತಿ ಬಿಗಡಾಯಿಸುತ್ತಿದ್ದು, ಸರ್ಕಾರ ಕೂಡಲೇ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸಿ, ಆ ಹಣವನ್ನು ಕೊರೋನಾ ನಿಯಂತ್ರಣಕ್ಕೆ ವಿನಿಯೋಗಿಸಬೇಕು. ಸಮರೋಪಾದಿಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಅತಿ ಹೆಚ್ಚು ವೈದ್ಯಕೀಯ ಕಾಲೇಜುಗಳಿವೆ. ಸಾಕಷ್ಟು ಪ್ರಮಾಣದಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿಗಳಿದ್ದಾರೆ. ಈ ಎಲ್ಲ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಪ್ರತಿಯೊಬ್ಬರಿಗೂ ಉಚಿತ ಚಿಕಿತ್ಸೆ ಸಿಗುವಂತಾಗಬೇಕು. ಪರೀಕ್ಷೆ ಪ್ರಮಾಣ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಕನಿಷ್ಠ ಪಕ್ಷ ₹ 30 ಸಾವಿರ ಕೋಟಿಯನ್ನಾದರೂ ಮೀಸಲಿಡಬೇಕು ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.



Join Whatsapp