123 ವಕ್ಫ್ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾದ ಕೇಂದ್ರ ಸರ್ಕಾರ

Prasthutha|

ನವದೆಹಲಿ: ದೆಹಲಿ ವಕ್ಫ್ ಮಂಡಳಿಯ (ಡಿಡಬ್ಲ್ಯೂಎಫ್) 123 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

- Advertisement -

ದೆಹಲಿ ವಕ್ಫ್ ಮಂಡಳಿಯ ಅಧ್ಯಕ್ಷ ಅಮಾನತುಲ್ಲಾ ಖಾನ್ ಅವರು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ವಕ್ಫ್ ಆಸ್ತಿಗಳಲ್ಲಿ ಮಸೀದಿಗಳು, ದರ್ಗಾಗಳು ಮತ್ತು ಖಬರಸ್ತಾನಗಳೂ ಸೇರಿವೆ. 

- Advertisement -

ಮಸೀದಿಗಳು, ದರ್ಗಾಗಳು ಮತ್ತು ಖಬರಸ್ತಾನಗಳು ಸೇರಿದಂತೆ ದೆಹಲಿ ವಕ್ಫ್ ಮಂಡಳಿಯ 123 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನಿರ್ಧರಿಸಿದ ನಂತರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ನಡುವೆ ವಾಗ್ದಾಳಿ ನಡೆದಿದೆ.

ಮಾಜಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ದೆಹಲಿ ಹೈಕೋರ್ಟ್ ರಚಿಸಿದ ಸಮಿತಿಯ ವರದಿಯನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

  ಕೇಂದ್ರದ ಈ ಕ್ರಮಕ್ಕೆ ಮಂಡಳಿ ಅಧ್ಯಕ್ಷ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಅಮಾನತುಲ್ಲಾ ಖಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ವಕ್ಫ್ ಆಸ್ತಿಯನ್ನು ಪಡೆಯಲು ಕೇಂದ್ರ ಸರ್ಕಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಖಾನ್ ಹೇಳಿದ್ದಾರೆ.

Join Whatsapp