ಮುಸ್ಲಿಮರ ನರಮೇಧಕ್ಕೆ ಕರೆ; ಸರ್ಕಾರದ ಮೌನ ಖಂಡನೀಯ: ಜಮೀಯತ್ ಉಲಮಾ-ಇ-ಹಿಂದ್

Prasthutha|

ನವದೆಹಲಿ: ಇತ್ತೀಚೆಗೆ ಹರಿದ್ವಾರದಲ್ಲಿ ನಡೆದ ಧರ್ಮ ಸಂಸತ್ ಕಾರ್ಯಕ್ರಮದಲ್ಲಿ ಮುಸ್ಲಿಮರ ನರಮೇಧಕ್ಕೆ ಬಹಿರಂಗ ಕರೆ ನೀಡಿದವರ ವಿರುದ್ಧ ಸರ್ಕಾರದ ಮೌನ ನಡೆ ಖಂಡನೀಯ ಎಂದು ಜಮೀಯತ್ ಉಲಮಾ-ಇ-ಹಿಂದ್ ನ ಅಧ್ಯಕ್ಷ ಮೌಲಾನಾ ಮಹಮೂದ್ ಮದನಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ರಾಷ್ಟ್ರೀಯ ಮಾನವಹಕ್ಕುಗಳ ಆಯೋಗ ಮತ್ತು ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಸೇರಿದಂತೆ ವಿವಿಧ ಪ್ರಾಧಿಕಾರಗಳಿಗೆ ಅವರು ಪತ್ರ ಬರೆದು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದವರು ದೇಶದ ಶಾಂತಿ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ತಂದಿದ್ದಾರೆ ಎಂದು ಕೂಡ ಆರೋಪಿಸಿದರು.

- Advertisement -

ಉತ್ತರಾಖಂಡದ ಹರಿದ್ವಾರದಲ್ಲಿ 3 ದಿನಗಳ ಕಾಲ ನಡೆದ ಹಿಂದೂ ಧರ್ಮ ಸಂಸತ್ ಅನ್ನು ಉದ್ದೇಶಿಸಿ ಮಾತನಾಡಿದ ಹಲವಾರು ಸಂಘಪರಿವಾರದ ನಾಯಕರು ಮತ್ತು ಸನ್ಯಾಸಿಗಳು ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದರು ಮತ್ತು 2029 ಮುಸ್ಲಿಮರು ದೇಶದ ಪ್ರಧಾನಿಯನ್ನಾಗುವುದನ್ನು ತಡೆಯಲು ಹಿಂದೂಗಳು ಶಸ್ತ್ರಾಸ್ತ್ರಗಳನ್ನು ತೆಗೆದುಕೊಳ್ಳುವಂತೆ ಕರೆ ನೀಡಿದ್ದರು.

ವಿವಾದಿತ ಸಂಘಪರಿವಾರದ ಮುಖಂಡ ಯತಿ ನರಸಿಂಹಾನಂದ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೆಹಲಿಯ ಬಿಜೆಪಿ ಮಾಜಿ ವಕ್ತಾರ ಅಶ್ವಿನಿ ಉಪಾಧ್ಯಾಯ ಸೇರಿದಂತೆ ಸಂಘಪರಿವಾರದ ಹಲವು ನಾಯಕರು ಪಾಲ್ಗೊಂಡಿದ್ದರು.

Join Whatsapp