ಬೆಂಗಳೂರು: ಕಾನೂನು ವಿರುದ್ಧ ಯಾರೇ ನಡೆದುಕೊಂಡರೂ ಅವರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಕೆರಗೋಡಿನಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೆರಗೋಡಿನಲ್ಲಿ ಧ್ವಜ ಹಾರಿಸಲು ಅನುಮತಿ ಕೇಳಿದ್ದರು. ರಾಷ್ಟ್ರಧ್ವಜ, ನಾಡ ಧ್ವಜ ಹಾರಿಸಲು ಅನುಮತಿ ಕೇಳಿದ್ರು. ಅದಕ್ಕೆ ಅನುಮತಿ ಪಂಚಾಯತ್ ಅವರೇ ಕೊಟ್ಟಿದ್ದಾರೆ. ಪಂಚಾಯತ್ ಅವರು ಅನುಮತಿ ಕೊಡುವಾಗ ಕೆಲವು ಕಂಡೀಷನ್ ಹಾಕಿ ಕೊಟ್ಟಿದ್ದಾರೆ. ಬೇರೆ ಧ್ವಜ ಹಾಕಬಾರದು ಎಂದು ಪಂಚಾಯತ್ ಹೇಳಿ, ಮುಚ್ಚಳಿಕೆ ಬರೆಸಿಕೊಂಡು ಅನುಮತಿ ಕೊಟ್ಟಿದ್ದಾರೆ. ಮುಚ್ಚಳಿಕೆಯಲ್ಲಿ ಅವರು ಬೇರೆ ಯಾವುದೇ ಧ್ವಜ ಹಾಕೋದಿಲ್ಲ ಎಂದು ಬರೆದು ಕೊಟ್ಟಿದ್ದಾರೆ. ರಾಷ್ಟ್ರ ಮತ್ತು ನಾಡ ಧ್ವಜ ಬಿಟ್ಟು ಯಾವುದೇ ರಾಜಕೀಯ ಧ್ವಜ ಹಾಕೋದಿಲ್ಲ, ಧರ್ಮದ ಧ್ವಜ ಹಾಕೋದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಅದಾದ ಮೇಲೂ ಹೋಗಿ ಹನುಮಾನ್ ಧ್ವಜ ಹಾರಿಸಿದ್ದಾರೆ. ಇದು ಸರಿಯಲ್ಲ ಎಂದರು.