ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ: ಸಿಎಂ ಸಿದ್ದರಾಮಯ್ಯ

Prasthutha|

ಶಿರಸಿ: ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

- Advertisement -


ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, BJP ಖಾಸಗಿ ಸಂಸ್ಥೆಯೊಂದರ FSL ವರದಿಯನ್ನು ತಂದಿಟ್ಟು ರಾಜ್ಯದ ಜನರ ದಿಕ್ಕು ತಪ್ಪಿಸಿದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಖಾಸಗಿ ಸಂಸ್ಥೆ ನೀಡುವ FSL ವರದಿಯನ್ನು ಸರ್ಕಾರ ಒಪ್ಪುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದರು.


ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಆದ್ಯತೆಯಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 854 ಕೋಟಿ ರೂ. ಪಿಡಿ ಖಾತೆಯಲ್ಲಿದೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಉಚಿತ ಸಹಾಯವಾಣಿ ಆರಂಭಿಸಲಾಗುವುದು. ಸಚಿವರು ಮತ್ತು ಶಾಸಕರ ಅಧ್ಯಕ್ಷತೆ ಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ. ಪ್ರತಿ ವಾರಕ್ಕೊಮ್ಮೆ ಪಿಡಿಒ ಗಳು ಮತ್ತು ವಿಎ ಗಳ ಸಭೆ ನಡೆಸುವಂತೆ ಸೂಚನೆ ನೀಡಲಾಗಿದೆ. ಈ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಡಿಸಿ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

Join Whatsapp
Exit mobile version