ಬೆಂಗಳೂರು: ನ್ಯಾಯಾಧೀಶರ ನೇಮಕಾತಿಯಲ್ಲಿ ಸರಕಾರದ ಹಸ್ತಕ್ಷೇಪ ನ್ಯಾಯಾಂಗವನ್ನು ಸಂಪೂರ್ಣ ರಾಜಕೀಯಗೊಳಿಸುವ ಬಿಜೆಪಿಯ ಹುನ್ನಾರ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನ್ಯಾಯಾಧೀಶರ ಆಯ್ಕೆ ಸಮಿತಿಯಲ್ಲಿ ಸರ್ಕಾರದ ಪ್ರತಿನಿಧಿಗೆ ಸ್ಥಾನ ಇರಬೇಕು ಎಂಬ ಕೇಂದ್ರ ಸರ್ಕಾರದ ಬೇಡಿಕೆಯು ನ್ಯಾಯಾಂಗ ವ್ಯವಸ್ಥೆಯನ್ನು ಸಂಪೂರ್ಣ ರಾಜಕೀಯಗೊಳಿಸುವ ಬಿಜೆಪಿಯ ಹುನ್ನಾರ ಎಂದು ಹೇಳಿದ್ದಾರೆ.
ನ್ಯಾಯಾಧೀಶರನ್ನು ನೇಮಕ ಮಾಡುವ ಸುಪ್ರೀಂ ಕೋರ್ಟಿನ ಕೊಲಿಜಿಯಂನಲ್ಲಿ ಕೇಂದ್ರ ಸರಕಾರದ ಪ್ರತಿನಿಧಿಗಳೂ ಇರಬೇಕು ಎಂದು ಒಕ್ಕೂಟ ಸರಕಾರದ ಕಾನೂನು ಮಂತ್ರಿ ಕಿರಣ್ ರಿಜಿಜು ಅವರು ಸಿಜೆಐ ಡಿ. ವೈ. ಚಂದ್ರಚೂಡರಿಗೆ ಪತ್ರ ಬರೆದಿದ್ದರು.