ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಅವರನ್ನು ನಿಯೋಜಿಸಲಾಗಿದೆ.
ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ರಜನೀಶ್ ಅವರಿಗೆ ಸಿಎಂ ಕಾರ್ಯಾಲಯದ ಹೊಣೆಯನ್ನು ನೀಡಲಾಗಿದೆ.