Home ಜಾಲತಾಣದಿಂದ ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಗ್ರಾಮ ಪಂಚಾಯತ್

ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಗ್ರಾಮ ಪಂಚಾಯತ್

ತುಮಕೂರು: ವಿದ್ಯುತ್ ಪ್ರಸರಣದಲ್ಲಿ ಏರುಪೇರಿನಿಂದ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಗ್ರಾಮ ಪಂಚಾಯತ್ ಕಚೇರಿಯ ಕಂಪ್ಯೂಟರ್ ಸೇರಿದಂತೆ ಕಡತಗಳಿಗೆ ಬೆಂಕಿ ತಗುಲಿ ಸುಟ್ಟು ಭಸ್ಮವಾದ ಘಟನೆ ತುಮಕೂರಿನಲ್ಲಿ ನಡೆದಿದೆ.

ಪಾವಗಡ ತಾಲೂಕಿನ ಪೊನ್ನಸಂದ್ರ ಗ್ರಾಮ ಪಂಚಾಯಿತಿಯಲ್ಲಿ ಈ ಘಟನೆ ನಡೆದಿದ್ದು, ವಿದ್ಯುತ್‌ನ ವೋಲ್ಟೇಜ್ ಹೆಚ್ಚಾದ ಹಿನ್ನೆಲೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಪ್ರಮುಖ ಫೈಲ್‌ಗಳು ಸೇರಿದಂತೆ ಕಂಪ್ಯೂಟರ್‌ಗಳು ಸಹ ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ. ಘಟನೆ ನಡೆದ ಸಮಯದಲ್ಲಿ ಸ್ಥಳೀಯರು ನೀರಿನಿಂದ ಬೆಂಕಿಯನ್ನು ಆರಿಸಲು ಹರಸಾಹಸ ಪಟ್ಟರೂ ಸಾಧ್ಯವಾಗಲಿಲ್ಲ

ಬಳಿಕ ಸ್ಥಳಕ್ಕೆ ಪಾವಗಡ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Join Whatsapp
Exit mobile version