ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಮಾಸಿಕ ಗೌರವಧನ ಹೆಚ್ಚಳ

Prasthutha|

- Advertisement -

ಬೆಂಗಳೂರು: ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಮಾಸಿಕ ಗೌರವಧನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ 3 ಸಾವಿರ ರೂ., ಉಪಾಧ್ಯಕ್ಷರಿಗೆ 2 ಸಾವಿರ ರೂ. ಹಾಗೂ ಸದಸ್ಯರಿಗೆ 1 ಸಾವಿರ ರೂ. ಮಾಸಿಕ ಗೌರವ ಧನವನ್ನು ಈ ವರೆಗೆ ನೀಡಲಾಗುತ್ತಿತ್ತು. ಆದರೆ ಇದೀಗ ಅಧ್ಯಕ್ಷರಿಗೆ 6 ಸಾವಿರ ರೂ., ಉಪಾಧ್ಯಕ್ಷ ರಿಗೆ 4 ಸಾವಿರ ರೂ. ಹಾಗೂ ಸದಸ್ಯರಿಗೆ 2 ಸಾವಿರ ರೂ. ಗೌರವ ಧನ ಹೆಚ್ಚಳ ಮಾಡಲಾಗಿದೆ.



Join Whatsapp