Home ಟಾಪ್ ಸುದ್ದಿಗಳು 3 ವಾರದೊಳಗೆ ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ ಪ್ರಕಟಿಸಲು ಹೈಕೋರ್ಟ್ ಆದೇಶ

3 ವಾರದೊಳಗೆ ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ ಪ್ರಕಟಿಸಲು ಹೈಕೋರ್ಟ್ ಆದೇಶ

ಬೆಂಗಳೂರು : ಮೂರು ವಾರದೊಳಗೆ ಚುನಾವಣಾ ವೇಳಾ ಪಟ್ಟಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.

ಅವಧಿ ಮುಗಿದಿರುವ ಗ್ರಾಮ ಪಂಚಾಯತ್ ಗಳಿಗೆ ಶೀಘ್ರ ಚುನಾವಣೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಕೆ.ಸಿ. ಕೊಂಡಯ್ಯ ಹಾಗೂ ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸಿಜೆ ಎ.ಎಸ್. ಒಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.

ಚುನಾವಣಾ ಆಯೋಗಕ್ಕೆ ರಾಜ್ಯ ಸರಕಾರ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು. ಸಿಬ್ಬಂದಿಯ ಅಗತ್ಯವಿದ್ದರೆ ಚುನಾವಣಾ ಆಯೋಗ ರಾಜ್ಯಪಾಲರನ್ನು ಸಂಪರ್ಕಿಸಬಹುದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಕೋವಿಡ್ 19 ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡುವಂತೆ ರಾಜ್ಯ ಸರಕಾರ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಆದರೆ, ಆಯೋಗ ವೇಳಾಪಟ್ಟಿಯ ಪ್ರಕಾರ, ಕೋವಿಡ್ ಮಾರ್ಗಸೂಚಿಗಳೊಂದಿಗೆ ಚುನಾವಣೆ ನಡೆಸುವ ನಿರ್ಧಾರ ಕೈಗೊಂಡಿದೆ.   

Join Whatsapp
Exit mobile version