ಚಿಕ್ಕಮಗಳೂರಿನಲ್ಲಿ 15 ಗ್ರಾಮ ಪಂಚಾಯತಿಗಳಲ್ಲಿ ಚುನಾವಣೆ ಬಹಿಷ್ಕಾರ!

Prasthutha|

ಚಿಕ್ಕಮಗಳೂರು : ರಾಜ್ಯಾದ್ಯಂತ ಇಂದು ಮೊದಲ ಸುತ್ತಿನ ಗ್ರಾಮ ಪಂಚಾಯತ್ ಚುನಾವಣೆಗೆ ಮತದಾನ ಆರಂಭವಾಗಿದ್ದು, ಈ ನಡುವೆ ಚಿಕ್ಕಮಗಳೂರು ಜಿಲ್ಲೆಯಲ್ಲಿ 15 ಗ್ರಾಮ ಪಂಚಾಯತಿಗಳಲ್ಲಿ ಜನರು ಮತದಾನಕ್ಕೆ ಬಹಿಷ್ಕಾರ ಹಾಕಿದ್ದಾರೆ ಎಂದು ವರದಿಯೊಂದು ತಿಳಿಸಿದೆ.

- Advertisement -

ಚಿಕ್ಕಮಗಳೂರು ಜಿಲ್ಲೆಯಲ್ಲಿ 15 ಗ್ರಾಮ ಪಂಚಾಯತಿಗಳಲ್ಲಿ ಜನರು ನಾಮಪತ್ರವನ್ನೇ ಸಲ್ಲಿಸದೆ, ಚುನಾವಣಾ ಪ್ರಕ್ರಿಯೆಯಿಂದ ದೂರ ಉಳಿದಿದ್ದಾರೆ.

ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದನ್ನು ವಿರೋಧಿಸಿ ಗ್ರಾಮಸ್ಥರು ಚುನಾವಣಾ ಪ್ರಕ್ರಿಯೆಯಿಂದ ದೂರ ಉಳಿದಿದ್ದಾರೆ ಎನ್ನಲಾಗಿದೆ.

- Advertisement -

ಡಾ. ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವಂತೆ ಕೇಂದ್ರ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯಕ್ಕೆ ರಾಷ್ಟ್ರೀಯ ಹಸಿರುವ ನ್ಯಾಯಾಧಿಕರಣ ಸೂಚನೆ ನೀಡಿದೆ. ಇದರಿಂದಾಗಿ ಪಶ್ಚಿಮ ಘಟ್ಟ ಪ್ರದೇಶದ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಜನರಲ್ಲಿ ಆತಂಕ ಎದುರಾಗಿದೆ. ಹೀಗಾಗಿ 15 ಗ್ರಾಮಗಳ ಜನರು ಚುನಾವಣಾ ಪ್ರಕ್ರಿಯೆಯಿಂದ ದೂರ ಉಳದಿದ್ದಾರೆ ಎಂದು ವರದಿ ತಿಳಿಸಿದೆ.  

Join Whatsapp