ಗ್ರಾ.ಪಂ. ಚುನಾವಣೆ | ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ ; ಇವಿಎಂ ಇಲ್ಲ

Prasthutha|

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ 220 ಗ್ರಾಮ ಪಂಚಾಯತ್ ಗಳ 3,222 ಸ್ಥಾನಗಳಿಗೆ ಎರಡು ಹಂತದಲ್ಲಿ ನಡೆಯುವ ಚುನಾವಣೆಗೆ ಸಿದ್ಧತೆ ನಡೆದಿದ್ದು, ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಮೊದಲ ಹಂತದಲ್ಲಿ 106 ಮತ್ತು ಎರಡನೇ ಹಂತದಲ್ಲಿ 114 ಗ್ರಾ.ಪಂ.ಗಳಿಗೆ ಮತದಾನ ನಡೆಯಲಿದೆ. ಜಿಲ್ಲೆಯಲ್ಲಿ 5,12,808 ಪುರುಷರು ಮತ್ತು 5,26,288 ಮಹಿಳೆಯರ ಸಹಿತ ಒಟ್ಟು 10,39,096 ಮತದಾರರು ಮತದಾನ ಮಾಡಲು ಅರ್ಹತೆ ಹೊಂದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

- Advertisement -

ಚುನಾವಣೆಯಲ್ಲಿ ಇವಿಎಂ ಬಳಕೆಯಿಲ್ಲ, ಕೋವಿಡ್ 19 ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

- Advertisement -