ಅಜ್ಜ-ಅಜ್ಜಿಯ ಕೊಲೆ ಪ್ರಕರಣ: ಆರೋಪಿ ಮಂಗಳೂರಿನಲ್ಲಿ ಬಂಧನ

Prasthutha|

ಮಂಗಳೂರು: ಕೇರಳದ ತ್ರಿಶೂರ್ ನಲ್ಲಿ ತನ್ನ ಅಜ್ಜ- ಅಜ್ಜಿಯ ಕೊಲೆ ಮಾಡಿದ್ದ ಆರೋಪಿಯೊಬ್ಬನನ್ನು ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ.

- Advertisement -


ಬಂಧಿತ ಆರೋಪಿಯನ್ನು ತ್ರಿಶೂರ್ ಜಿಲ್ಲೆಯ ವೈಲತ್ತೂರು ನಿವಾಸಿ ಅಹಮ್ಮದ್ ಅಕ್ಕಲ್ (27 ವರ್ಷ) ಎಂದು ಗುರುತಿಸಲಾಗಿದೆ. ಆರೋಪಿ ಕೇರಳದ ತ್ರಿಶೂರ್ ಜಿಲ್ಲೆಯ ವಡೆಕ್ಕೆಕಾಡ್ ಎಂಬಲ್ಲಿ ಜುಲೈ 23 ರಂದು ರಾತ್ರಿ ತನ್ನ ಅಜ್ಜ ಮತ್ತು ಅಜ್ಜಿಯನ್ನು ಕೊಲೆ ಮಾಡಿ ಅವರ ಚಿನ್ನಾಭರಣಗಳನ್ನು ದೋಚಿ ಮಂಗಳೂರಿಗೆ ಬಂದಿದ್ದ. ಸೋಮವಾರ ಮಂಗಳೂರಿನ ಕಾರ್ ಸ್ಟ್ರೀಟ್ ಪರಿಸರದಲ್ಲಿ ಅನುಮಾನಸ್ಪದ ಚಿನ್ನಾಭರಣಗಳನ್ನು ಮಾರಾಟ ಮಾಡಲು ಯತ್ನಿಸಿದಾಗ ಪೊಲೀಸರಿಗೆ ಸೆರೆಯಾಗಿದ್ದಾನೆ.


ಆತನ ಬಳಿಯಿದ್ದ ಮುತ್ತಿನ ಎರಡು ಎಳೆಯ ಬಂಗಾರದ ಸರ-1, ಸಣ್ಣ ಪದಕವಿರುವ ಚೈನ್ ಹಾಗೂ ಕಿವಿಯೊಲೆ-3, ಉಂಗುರ-5 , ಕೈಬಳೆ-2 , ಮತ್ತು ಪಾಸ್ ಪೋರ್ಟ್ ಹಾಗೂ ಇತರೆ ದಾಖಲಾತಿಗಳನ್ನು ವಶಕ್ಕೆ ಪಡೆಯಲಾಗಿದೆ.

Join Whatsapp