Home ಟಾಪ್ ಸುದ್ದಿಗಳು ಆಂಧ್ರ–ಬಿಹಾರಕ್ಕೆ ಅನುದಾನ; ಮೋದಿ ತಮ್ಮ ಕುರ್ಚಿಯನ್ನು ಭದ್ರಪಡಿಸಿಕೊಂಡಿಸಿದ್ದಾರೆ: ಟಿಎಂಸಿ

ಆಂಧ್ರ–ಬಿಹಾರಕ್ಕೆ ಅನುದಾನ; ಮೋದಿ ತಮ್ಮ ಕುರ್ಚಿಯನ್ನು ಭದ್ರಪಡಿಸಿಕೊಂಡಿಸಿದ್ದಾರೆ: ಟಿಎಂಸಿ

ಕೋಲ್ಕತ್ತ: ಕೇಂದ್ರದ ಬಜೆಟ್, ಕೇವಲ ಆಂಧ್ರ ಮತ್ತು ಬಿಹಾರ ರಾಜ್ಯಗಳಿಗೆ ವಿಶೇಷವಾಗಿ ಮಂಡಿಸಲಾದ ಬಜೆಟ್ ಆಗಿದ್ದು, ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕುರ್ಚಿಯನ್ನು ಭದ್ರಪಡಿಸಿಕೊಂಡಿಸಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಂಗಳವಾರ ವಾಗ್ದಾಳಿ ನಡೆಸಿದೆ.


ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಟಿಎಂಸಿ, ಕೇಂದ್ರ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಮಂಡಿಸಿರುವ ಬಜೆಟ್, ಆರ್ಥಿಕ ಮತ್ತು ರಾಜಕೀಯ ದಿವಾಳಿತನದ ಪ್ರತಿಬಿಂಬವಾಗಿದೆ ಎಂದು ಟೀಕಿಸಿದೆ. ತಮ್ಮ ಕುರ್ಚಿಯನ್ನು ಭದ್ರಪಡಿಸಿಕೊಳ್ಳುವ ನಿಟ್ಟಿನಲ್ಲಿ ಮೋದಿ ನೇತೃತ್ವದ ಸರ್ಕಾರವು ಆಂಧ್ರ ಮತ್ತು ಬಿಹಾರ ರಾಜ್ಯಗಳಿಗೆ ವಿಶೇಷ ಅನುದಾನವನ್ನು ನೀಡಿದೆ. ಪಶ್ಚಿಮ ಬಂಗಾಳವನ್ನು ನಿರ್ಲಕ್ಷ್ಯಿಸಲಾಗಿದೆ. ಎಂದು ಟಿಎಂಸಿಯ ಹಿರಿಯ ನಾಯಕ ಕುನಾಲ್ ಘೋಷ್ ಎಕ್ಸ್ ನಲ್ಲಿ ತಿಳಿಸಿದ್ದಾರೆ.

Join Whatsapp
Exit mobile version