ಮಾಲ್ ನಲ್ಲಿ ಅಗ್ನಿ ಅವಘಡ: ಜೀವ ಉಳಿಸಿಕೊಳ್ಳಲು 3ನೇ ಮಹಡಿಯಿಂದ ಜಿಗಿದ ಜನ

Prasthutha|

ನೋಯ್ಡಾ: ಶಾಪಿಂಗ್ ಮಾಲ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮಾಲ್ ನಲ್ಲಿ ಸಿಲುಕಿಕೊಂಡ ಜನ ತಮ್ಮ ಜೀವ ಉಳಿಸಿಕೊಳ್ಳಲು ಮೂರನೇ ಮಹಡಿಯಿಂದ ಜಿಗಿಯುತ್ತಿರುವ ಭಯಾನಕ ವಿಡಿಯೋ ವೈರಲ್ ಆಗಿದೆ.

- Advertisement -

ಗ್ರೇಟರ್ ನೋಯ್ಡಾ ಗ್ಯಾಲಕ್ಸಿ ಪ್ಲಾಜಾ ಮಾಲ್‌ನಲ್ಲಿ ಗುರುವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಘಟನಾ ಸ್ಥಳಕ್ಕೆ ರಕ್ಷಣಾ ತಂಡ ದೌಡಾಯಿಸಿದ್ದು ಕಟ್ಟಡದ ಮೂರನೇ ಮಹಡಿಯಲ್ಲಿ ಸಿಲುಕಿದ್ದ ಕೆಲವರನ್ನು ರಕ್ಷಣೆ ಮಾಡಲಾಗಿದೆ.

ವೀಡಿಯೊದಲ್ಲಿ, ಜನರು ಮಾಲ್‌ನ ಕಿಟಕಿಯಿಂದ ನೇತಾಡುವವರಿಗೆ “ಜಂಪ್, ಜಂಪ್” ಎಂದು ಹೇಳುವುದನ್ನು ಕೇಳಬಹುದು. ಬೆಂಕಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಜನರು ಕಟ್ಟಡದಿಂದ ಜಿಗಿಯುತ್ತಿರುವುದನ್ನು ಕಾಣಬಹುದು. ಆದರೆ ಇಲ್ಲಿ ರಕ್ಷಣಾ ತಂಡ ಜನರ ಸುರಕ್ಷತೆಗಾಗಿ ಕ್ರಮಗಳನ್ನು ಕೈಗೊಂಡ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

- Advertisement -

ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದ್ದು ಇದುವರೆಗೂ ಯಾವುದೇ ಸಾವು ನೋವಿನ ಬಗ್ಗೆ ವರದಿಯಾಗಲಿಲ್ಲ.