ಭಾರತದ ಸ್ಥಿತಿ ಹೃದಯ ವಿದ್ರಾವಕ | ಜಾಗತಿಕ ಸಮುದಾಯ ನೆರವಿಗೆ ಧಾವಿಸಬೇಕು : ಗ್ರೇಟಾ ಥನ್ಬರ್ಗ್

Prasthutha: April 25, 2021

ಹೊಸದಿಲ್ಲಿ :  ಭಾರತದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹಚ್ಚಾಗುತ್ತಲೇ ಇದ್ದು, ದೇಶಾದ್ಯಂತ ಆಕ್ಸಿಜನ್ ಕೊರತೆಯಿಂದ ಜನರು ಕಂಗಾಲಾಗಿದ್ದಾರೆ. ಈ ನಡುವೆ ಸ್ವೀಡನ್ ನ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್ಬರ್ಗ್ ಭಾರತದ ಬೆಳವಣಿಗೆಗಳ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಭಾರತದಲ್ಲಿನ ಆಕ್ಸಿಜನ್ ಕೊರತೆ ವಿಚಾರವಾಗಿ ಟ್ವೀಟ್ ಮಾಡಿರುವ ಗ್ರೇಟಾ, ‘ಭಾರತದ ಇತ್ತೀಚಿನ ಬೆಳವಣಿಗೆಗಳು ಹೃದಯ ವಿದ್ರಾವಕವಾಗಿದೆ. ಜಾಗತಿಕ ಸಮುದಾಯವು ಎಚ್ಚೆತ್ತುಕೊಂಡು ತಕ್ಷಣವೇ ಅಗತ್ಯವಾದ ಸಹಾಯವನ್ನು ನೀಡಬೇಕು’ ಎಂದು ಹೇಳಿದ್ದಾರೆ.

ಭಾರತದಲ್ಲೀಗ ವಿಶ್ವದಲ್ಲೇ ಅತ್ಯಂತ ಹೆಚ್ಚು ದೈನಂದಿನ ಕೊರೋನ ಪ್ರಕರಣ ವರದಿಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 3.46 ಲಕ್ಷಕ್ಕೂ ಅಧಿಕ ಕೋವಿಡ್ ಸೋಂಕು ಪ್ರಕರಣ ವರದಿಯಾಗಿದೆ. 2,624 ಜನರು ಸಾವನ್ನಪ್ಪಿದ್ದಾರೆ.

ಈ ಹಿಂದೆ ಭಾರತದ ರೈತರ ಹೋರಾಟವನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದ ಗ್ರೇಟಾ ಥನ್ಬರ್ಗ್ ವ್ಯಾಪಕ ಮಿಶ್ರ ಪ್ರತಿಕ್ರಿಯೆ ಪಡೆದಿದ್ದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!