ಇಂದಿನಿಂದ ಗೃಹಜ್ಯೋತಿ ಯೋಜನೆ ಪ್ರಾರಂಭ: ಸಿಎಂ ಸಿದ್ದರಾಮಯ್ಯ ಮಾಹಿತಿ

Prasthutha|

ಬೆಂಗಳೂರು: ಗೃಹಜ್ಯೋತಿ ಇಂದಿನಿಂದ ಪ್ರಾರಂಭವಾಗುತ್ತಿದ್ದು ಈ ತಿಂಗಳು ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆಯ ಬಿಲ್ ಆಗಸ್ಟ್ ತಿಂಗಳಲ್ಲಿ ನೀಡಲಾಗುವುದು. ಅನ್ನಭಾಗ್ಯದ ಹಣ ಈ ತಿಂಗಳು 10 ರ ನಂತರ ಪ್ರಾರಂಭ ಮಾಡುತ್ತೇವೆ. ಜುಲೈ ತಿಂಗಳಲ್ಲಿ ಅಕ್ಕಿ ಬದಲಿಗೆ ದುಡ್ಡನ್ನು ಒಂದನೇ ತಾರೀಖಿಗೆ ಕೊಡುತ್ತೇವೆ ಎಂದು ಹೇಳಿಲ್ಲ. ಈ ತಿಂಗಳ ಹಣವನ್ನು ಈ ತಿಂಗಳಲ್ಲಿಯೇ ನೀಡಲಾಗುವುದು ಎಂದರು.

ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಸಭೆ ನಡೆಯುತ್ತಿರುವ ಬಗ್ಗೆ ಮಾತನಾಡಿ ವಿರೋಧ ಪಕ್ಷ ಅವರ ಒಳಜಗಳವನ್ನು ಮೊದಲು ಸರಿಪಡಿಸಿಕೊಳ್ಳಲಿ ಎಂದರು.

Join Whatsapp
Exit mobile version