ಗೃಹಲಕ್ಷ್ಮಿ | ಆ.16ರಿಂದ ಯಜಮಾನಿಯ ಖಾತೆಗೆ 2,000 ರೂ. ಹಣ: ಸಿದ್ದರಾಮಯ್ಯ

Prasthutha|

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಆಗಸ್ಟ್ 16ರಿಂದ ಪ್ರತಿ ಕುಟುಂಬದ ಯಜಮಾನಿಯ ಖಾತೆಗೆ ತಿಂಗಳಿಗೆ 2,000 ಜಮಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -


ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ನೋಂದಣಿಗೆ ಚಾಲನೆ ನೀಡಿ ಮಾತನಾಡಿದ ಅವರು, ನರೆವು ವಿತರಣೆಯ ಆರಂಭದ ದಿನಾಂಕವನ್ನು ಘೋಷಿಸಿದರು.


ಚುನಾವಣೆಗೂ ಮುನ್ನ ನಾವು ಕೊಟ್ಟ ಮಾತಿನಂತೆ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ. ಈ ಯೋಜನೆಗಳ ಅನುಷ್ಠಾನದಿಂದ ರಾಜ್ಯವು ಆರ್ಥಿಕ ಸಂಕಷ್ಟಕ್ಕೆ ಸಿಲುಕಲಿದೆ ಎಂಬ ಮಾತುಗಳನ್ನು ಕೆಲವರು ಆಡುತ್ತಿದ್ದಾರೆ. ಅಂತಹ ಮಾತುಗಳಿಗೆ ಯಾವ ಬೆಲೆಯೂ ಇಲ್ಲ’ ಎಂದರು.

- Advertisement -


ಚಲನಶೀಲತೆಗೆ ನೆರವು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ‘ಗೃಹಲಕ್ಷ್ಮಿ ಯೋಜನೆಯು ರಾಜ್ಯದ ಕೋಟ್ಯಂತರ ಕುಟುಂಬಗಳಲ್ಲಿ ಬೆಳಕು ತರಲಿದೆ. ಮಹಿಳೆಯರ ಕೈಗೆ ಸಿಗುವ ಹಣ ಆರ್ಥಿಕತೆಯಲ್ಲಿ ಚಲನಶೀಲತೆಗೆ ನೆರವಾಗಲಿದೆ’ ಎಂದು ಹೇಳಿದರು.


ಅನ್ನಭಾಗ್ಯ ಯೋಜನೆಯನ್ನು ಮೈಸೂರಿನಲ್ಲಿ, ಗೃಹಜ್ಯೋತಿ ಯೋಜನೆಯನ್ನು ಕಲಬುರಗಿಯಲ್ಲಿ ಮತ್ತು ಗೃಹಲಕ್ಷ್ಮಿ ಯೋಜನೆಯನ್ನು ಬೆಳಗಾವಿಯಲ್ಲಿ ಉದ್ಘಾಟಿಸಲಾಗುವುದು ಎಂದು ತಿಳಿಸಿದರು.



Join Whatsapp