Home ಟಾಪ್ ಸುದ್ದಿಗಳು ‘ಗೃಹಲಕ್ಷ್ಮಿ’ ಹಣ ಇಂದಿನಿಂದ ಜಮೆ: ಲಕ್ಷ್ಮಿಹೆಬ್ಬಾಳ್ಕರ್

‘ಗೃಹಲಕ್ಷ್ಮಿ’ ಹಣ ಇಂದಿನಿಂದ ಜಮೆ: ಲಕ್ಷ್ಮಿಹೆಬ್ಬಾಳ್ಕರ್

ಮಂಡ್ಯ: ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಇಂದಿನಿಂದ (ಆ.08) ಹಣ ಜಮಾವಣೆ ಆಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಂತ್ರಿಕ ಕಾರಣದಿಂದ ಜೂನ್​ ಮತ್ತು ಜುಲೈ ಎರಡು ತಿಂಗಳ ಹಣ ಜಮೆ ಆಗಿರಲಿಲ್ಲ. ಇವತ್ತಿನಿಂದ ಜೂನ್, ಜುಲೈ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ ಎಂದು ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಒಂದು. ಮಹಿಳಾ ಸಬಲೀಕರಣ ಭಾಗವಾಗಿ ಕಾಂಗ್ರೆಸ್​ ಸರ್ಕಾರ ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದಿದೆ. ಈ ಯೋಜನೆ ಅಡಿಯಲ್ಲಿ ಸರ್ಕಾರ ಮನೆಯ ಯಜಮಾನಿ ಖಾತೆಗೆ 2 ಸಾವಿರ ರೂ. ಜಮೆ ಮಾಡುತ್ತದೆ. ಕಳೆದ 10 ತಿಂಗಳಿಂದ ಹಣ ಜಮೆಯಾಗಿತ್ತು. ಆದರೆ ಜೂನ್​ ಮತ್ತು ಜುಲೈನ ಹಣ ಜಮಾವಣೆಗೊಂಡಿಲ್ಲ.

Join Whatsapp
Exit mobile version