‘ಗೃಹಲಕ್ಷ್ಮಿ’ ಯೋಜನೆಗೆ ಅದ್ಧೂರಿ ಚಾಲನೆ

Prasthutha|

ಮೈಸೂರು: ಕಾಂಗ್ರೆಸ್ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹ ಲಕ್ಷ್ಮಿ ಯೋಜನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ‌ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹಾಗು ಸಚಿವ ಸಂಪುಟದ ಸಹೋದ್ಯೋಗಿಗಳು ಭಾಗವಹಿಸಿದ್ದಾರೆ.

- Advertisement -


ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಲಕ್ಷಾಂತರ ಜನರು ಸೇರಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಉಪಸ್ಥಿತಿಯಲ್ಲಿ ಚಾಲನೆ ನೀಡಲಾಗಿದೆ.


ಈ ಯೋಜನೆಯಡಿ ಮನೆಯ ಯಜಮಾನಿಗೆ 2000 ರೂಪಾಯಿ ಸಹಾಯಧನ ನೀಡಲಾಗುತ್ತದೆ. ರಾಜ್ಯದಲ್ಲಿ ಶೇ.86ರಷ್ಟು ಮಹಿಳೆಯರು ನೋಂದಣಿ ಮಾಡಿಕೊಂಡಿದ್ದು, 1.28 ಕೋಟಿ ಕುಟುಂಬದ ಯಜಮಾನಿಯರು ಯೋಜನೆಗೆ ಅರ್ಹತೆ ಪಡೆದಿದ್ದಾರೆ. ಜುಲೈ 19ರಿಂದ ಆರಂಭಗೊಂಡ ನೋಂದಣಿ ಪ್ರಕ್ರಿಯೆಯನ್ನು 1.11 ಕೋಟಿಗೂ ಹೆಚ್ಚು ಮಹಿಳೆಯರು ಪೊರೈಸಿದ್ದು, ಡಿಬಿಟಿ ಮೂಲಕ ಹಣ ಪಾವತಿ ಆಗಲಿದೆ.



Join Whatsapp