ಗೃಹಲಕ್ಷ್ಮಿ ಯೋಜನೆಗೆ ಆ.30 ರಂದು ಚಾಲನೆ: ಲಕ್ಷ್ಮಿ ಹೆಬ್ಬಾಳ್ಕರ್

Prasthutha|

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮದ ಸ್ಥಳ ಮತ್ತು ದಿನಾಂಕವನ್ನು ಬದಲಾಯಿಸಲಾಗಿದೆ.
ಆ.27ರ ಬದಲು ಆ.30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ನಡೆಯಲಿದೆ ಎಂದು ಬೆಂಗಳೂರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

- Advertisement -


ಈ ಹಿಂದೆ ಬೆಳಗಾವಿಯಲ್ಲಿ ಆ.27ರಂದು ಆಯೋಜಿಸಲಾಗಿದ್ದ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮವನ್ನು ಆ.30ರಂದು ಮೈಸೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆಯಬೇಕಿದ್ದ ಗೃಹಲಕ್ಷ್ಮಿ ಯೋಜನೆಯ ಚಾಲನೆ ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾಂತರಿಸಲಾಗಿದೆ. ಈ ಹಿಂದೆ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನೆಯನ್ನು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷೇತ್ರ ಬೆಳಗಾವಿಯಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಈಗ ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದರು.


ಈ ತಿಂಗಳ 30 ರಂದು ಮೈಸೂರಿಗೆ ರಾಹುಲ್ ಭೇಟಿ ನೀಡಲಿದ್ದು, ಅದೇ ದಿನ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ದೊರೆಯಲಿದೆ. ಐದು ಗ್ಯಾರಂಟಿಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಈ ಮೂಲಕ ಚಾಲನೆ ದೊರೆಯಲಿದೆ. ಈ ಯೋಜನೆಯ ಮೂಲಕ ಬಿಪಿಎಲ್ ಕಾರ್ಡ್ ಹೊಂದಿರುವ ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ. ಜಮೆಯಾಗಲಿದೆ.

Join Whatsapp