ಬೆಂಗಳೂರು: ಗೃಹಲಕ್ಷ್ಮೀ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ.
ಇನ್ನು ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗೆ ತಳ ಹಂತದಿಂದ ತರಬೇತಿ ನೀಡಲಾಗಿದೆ. ನಾಡಕಚೇರಿ, ಗ್ರಾಮ ಒನ್, ಬೆಂಗಳೂರು ಒನ್ ಸಿಬ್ಬಂದಿಗೂ ತರಬೇತಿ ನೀಡಿದ್ದು, ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ. ಪಡೆಯಲು, ಮನೆ ಯಜಮಾನಿಯ ಪತಿಯ ಆಧಾರ್ಕಾರ್ಡ್ ಕೂಡ ಬೇಕಾಗುತ್ತದೆ.
ಯೋಜನೆಯ ಉಚಿತ ಲಾಭ ಪಡೆದುಕೊಳ್ಳಲು ಸಹಾಯವಾಣಿ ಸಂಖ್ಯೆ. 8147500500ಕ್ಕೆ ಪಡಿತರ ಚೀಟಿ ಸಂಖ್ಯೆ SMS ಮಾಡಿ, ಕೂಡಲೇ ಇದು ಸ್ಥಳ, ಗೊತ್ತುಪಡಿಸಿದ ದಿನಾಂಕ, ಸಮಯ ಸಂದೇಶ ರವಾನಿಸುತ್ತದೆ. ಗೊಂದಲವಿದ್ದರೆ 1902 ನಂಬರ್ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಿ ಎಂದು ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.