ಬಾಗಲಕೋಟೆ: ಇಲ್ಲಿನ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ಗುಂಪು ಘರ್ಷಣೆ ನಡೆದಿದ್ದು, ಇಬ್ಬರಿಗೆ ಚೂರಿ ಇರಿಯಲಾಗಿದೆ. ಘಟನೆಯ ಬೆನ್ನಲ್ಲೇ ಮುಸ್ಲಿಮ್ ವ್ಯಾಪಾರಿಗಳ ತಳ್ಳುಗಾಡಿಗಳಿಗೆ ಬೆಂಕಿ ಹಚ್ಚಲಾಗಿದೆ.
ಹಿಂದೂ ರಕ್ಷಣಾ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಅರುಣ ಕಟ್ಟಿಮನಿ, ಲಕ್ಷ್ಮಣ ಕಟ್ಟಿಮನಿ ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಯಮನೂರಿ ಚು೦ಗಿನ ಎಂಬ ವ್ಯಕ್ತಿಗೂ ಗಾಯಗಳಾಗಿದೆ. ಗಾಯಾಳುಗಳನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದಾದ ಬಳಿಕ ದುಷ್ಕರ್ಮಿಗಳು ಮಾರುಕಟ್ಟೆಯಲ್ಲಿ ಮುಸ್ಲಿಮರಿಗೆ ಸೇರಿದ ತರಕಾರಿ ಅಂಗಡಿಗಳ ಮೇಲೆ ದಾಳಿ ನಡೆಸಿ ಬೆಂಕಿ ಹಚ್ಚಿದ್ದಾರೆ. ತರಕಾರಿಗಳನ್ನು ಚೆಲ್ಲಾಪಿಲ್ಲಿಯಾಗಿ ಎಸೆಯಲಾಗಿದೆ.ಸ್ಥಳೀಯ ನಿವಾಸಿಗಳ ಮನೆಯನ್ನು ಧ್ವಂಸಗೊಳಿಸಲಾಗಿದೆ. ಅಲ್ಲದೆ ಐದು ಬೈಕ್ ಗಳನ್ನು ಜಖಂಗೊಳಿಸಲಾಗಿದೆ. ಕೆರೂರು ಪಟ್ಟಣದಲ್ಲಿ ಉದ್ರಿಕ್ತ ವಾತಾವರಣ ಉಂಟಾಗಿದ್ದು ಪರಿಸ್ಥಿತಿ ನಿಯಂತ್ರಿಸಲು ಹೆಚ್ಚಿನ ಪಡೆಯನ್ನು ನಿಯೋಗಿಸಲಾಗಿದೆ.