ಜಿಎಸ್ ಟಿ ಪರಿಹಾರ: ಆಗಸ್ಟ್ ತಿಂಗಳಲ್ಲಿ ಅಂತಿಮ ನಿರ್ಣಯ; ಮುಖ್ಯಮಂತ್ರಿ ಬೊಮ್ಮಾಯಿ

Prasthutha|

ಬೆಂಗಳೂರು: ಜಿಎಸ್ ಟಿ ಮಂಡಳಿ ಸಭೆಯಲ್ಲಿ ರಾಜ್ಯಗಳಿಗೆ ಜಿಎಸ್ ಟಿ ಪರಿಹಾರವನ್ನು ವಿಸ್ತರಿಸುವ ಬಗ್ಗೆ ಚರ್ಚೆಯಾಗಿದೆ. ಆಗಸ್ಟ್ ತಿಂಗಳಲ್ಲಿ ಈ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

- Advertisement -

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಜಿ. ಎಸ್.ಟಿ ಕಾನೂನು ಸಮಿತಿಯು ಕಾನೂನು ತೊಡಕುಗಳನ್ನು ನಿವಾರಣೆ ಮಾಡಲು ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆ.  ಫಿಟ್ ಮೆಂಟ್ ಸಮಿತಿಯ ಶಿಫಾರಸ್ಸುಗಳನ್ನು ಅಂಗೀಕರಿಸಲಾಗಿದೆ ಎಂದರು.



Join Whatsapp