ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 22 ಲಕ್ಷ ಮೌಲ್ಯದ ಸೀರೆಗಳನ್ನು ಜಪ್ತಿ ಮಾಡಿದ GST ಅಧಿಕಾರಿಗಳು

Prasthutha|

ಚಿಕ್ಕಬಳ್ಳಾಪುರ: ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 22 ಲಕ್ಷ ಮೌಲ್ಯದ 2 ಲೋಡ್​ ಸೀರೆಗಳನ್ನು GST ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಬೆಂಗಳೂರಿನಿಂದ ಚಿಂತಾಮಣಿಗೆ ಟೆಂಪೋದಲ್ಲಿ ಸಾಗಿಸುತ್ತಿದ್ದಾಗ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರ ಕ್ರಾಸ್​​ ಬಳಿ ದಾಳಿ ಮಾಡಿ ಜಪ್ತಿ ಮಾಡಲಾಗಿದೆ. ವಶಪಡಿಸಿಕೊಳ್ಳಲಾದ ವಸ್ತುಗಳು ಶಿಡ್ಲಘಟ್ಟ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಸೀಕಲ್ ರಾಮಚಂದ್ರಗೌಡ ಎಂಬುವರಿಗೆ ಸೇರಿದ್ದು ಎನ್ನಲಾಗುತ್ತಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -