ನವದೆಹಲಿ: ಕೆಲವು ಕ್ಯಾನ್ಸರ್ ಔಷಧಿಗಳ ದರವನ್ನು ಕಡಿಮೆ ಮಾಡಲು ಜಿಎಸ್ ಟಿ ಕೌನ್ಸಿಲ್ ನಿರ್ಧರಿಸಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ನವೆಂಬರ್ ನಲ್ಲಿ ನಡೆಯಲಿರುವ ಮುಂದಿನ ಸಭೆಯಲ್ಲಿ ವೈದ್ಯಕೀಯ ಆರೋಗ್ಯ ವಿಮೆಯ ಮೇಲಿನ ದರ ಕಡಿತದ ಕುರಿತು ಕೌನ್ಸಿಲ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಅವರು ತಿಳಿಸಿದ್ದಾರೆ.
ಸೋಮವಾರ ನಡೆದ ಜಿಎಸ್ ಟಿ ಕೌನ್ಸಿಲ್ನ 54 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಸೀತಾರಾಮನ್, ಕೆಲವು ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್ ಟಿ ದರವನ್ನು ಶೇ.12 ರಿಂದ ಶೇ.5 ಕ್ಕೆ ಇಳಿಸಲಾಗಿದೆ ಎಂದು ಹೇಳಿದರು. ಕೌನ್ಸಿಲ್ ಸಹ ನಮ್ಕೀನ್ ಮೇಲಿನ ದರವನ್ನು ಶೇ.18 ರಿಂದ ಶೇ.12 ಕ್ಕೆ ಇಳಿಸಿದೆ ಎಂದು ಎಂದು ಮಾಹಿತಿ ನೀಡಿದ್ದಾರೆ.