ಗ್ಯಾರಂಟಿ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮುಟ್ಟಬೇಕು: ಇನಾಯತ್ ಅಲಿ

Prasthutha|

►ಕುಂಜತ್ತಬೈಲ್ ನಲ್ಲಿ ಇಂದಿರಾ ಸೇವಾ ಕೇಂದ್ರ ಲೋಕಾರ್ಪಣೆ

- Advertisement -


ಸುರತ್ಕಲ್: ಕಾಂಗ್ರೆಸ್ ಸರಕಾರ ಜಾರಿಗೆ ತರಲಿರುವ ಬಡವರಪರ ಇರುವ ಯೋಜನೆಯು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮುಟ್ಟಬೇಕು. ಇಂತಹ ಸೇವಾ ಕೇಂದ್ರಗಳ ಮೂಲಕ ಜನರ ಕೆಲಸ ನಿರಂತರವಾಗಿ ನಡೆಯಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಹೇಳಿದರು.


ಅವರು ಕುಂಜತ್ತಬೈಲ್ ನಲ್ಲಿ ಇಂದಿರಾ ಸೇವಾ ಕೇಂದ್ರವನ್ನು ಉದ್ಘಾಟಿಸಿ ಮಾತಾನಾಡಿದರು, ನಾವು ಚುನಾವಣೆ ಪೂರ್ವದಲ್ಲಿ ಮನೆ ಮನೆಗೆ ಭೇಟಿ ಕೊಟ್ಟು ಗ್ಯಾರಂಟಿ ಕಾರ್ಡ್ ಬಗ್ಗೆ ಜನರಿಗೆ ಮಾಹಿತಿ ನೀಡುತ್ತಿದ್ದಾಗ ಬಿಜೆಪಿಯವರು ಇದು ಜಾರಿಗೆ ತರಲು ಸಾಧ್ಯವೇ ಇಲ್ಲ. ಇದಕ್ಕೆ ಅಷ್ಟು ಸಾವಿರ ಕೋಟಿ ಬೇಕು ಇಷ್ಟು ಸಾವಿರ ಕೋಟಿ ಬೇಕು ಎಂದೆಲ್ಲ ಅಪಪ್ರಚಾರ ಮಾಡಿದರು. ಆದರೆ ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿ ಅವರು ಹೇಳಿದಂತೆಯೇ ಈಗಾಗಲೇ ಮಹಿಳೆಯರಿಗೆ ಸರಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣದ ಶಕ್ತಿ ಯೋಜನೆ ಜಾರಿಗೆ ಬಂದಿದ್ದು ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬರಲಿದೆ. ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತರಲು ಕೇಂದ್ರ ಸರಕಾರ ಅಡ್ಡಗಾಲು ಹಾಕುತ್ತಿದೆ. ಇದು ಖಂಡನೀಯ ಎಂದರು.

Join Whatsapp
Exit mobile version