Home ಟಾಪ್ ಸುದ್ದಿಗಳು ಜೂನ್ 1ರಿಂದ ಗ್ಯಾರಂಟಿಗಳನ್ನು ಜಾರಿ ಮಾಡಬೇಕು, ಇಲ್ಲಾಂದ್ರೆ ಹೋರಾಟ ಎಂದ ಪ್ರತಾಪ್ ಸಿಂಹ

ಜೂನ್ 1ರಿಂದ ಗ್ಯಾರಂಟಿಗಳನ್ನು ಜಾರಿ ಮಾಡಬೇಕು, ಇಲ್ಲಾಂದ್ರೆ ಹೋರಾಟ ಎಂದ ಪ್ರತಾಪ್ ಸಿಂಹ

ಮೈಸೂರು: ಗ್ಯಾರಂಟಿಗಳನ್ನು ಯಾವುದೇ ಷರತ್ತುಗಳಿಲ್ಲದೆ ಜಾರಿ ಮಾಡಬೇಕು. ಇಲ್ಲದಿದ್ದರೆ ಜೂನ್ 1 ರಿಂದ ಹೋರಾಟ ಮಾಡುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಕಾರ್ಡ್ ವಿಚಾರದಲ್ಲಿ ಬಿಜೆಪಿ ಎಚ್ಚೆತ್ತುಕೊಂಡಿದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ.
ಗ್ಯಾರಂಟಿ ಕಾರ್ಡ್ ಅಲ್ಲಿ ಕಂಡೀಷನ್ ಅಪ್ಲೈ ಅಂತಾ ಎಲ್ಲೂ ಹಾಕಿಲ್ಲ. ಎಲ್ಲಾ ಮನೆಯ ಯಜಮಾನಿಗೆ 2 ಸಾವಿರ ಕೊಡಬೇಕು. ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಯಣಕ್ಕೆ ಅವಕಾಶ ಕೊಡಬೇಕು. ಜೂನ್ 1 ರಿಂದ 200 ಯೂನಿಟ್ ಒಳಗೆ ವಿದ್ಯುತ್ ಬಿಲ್ ಬಂದರೆ ಕಟ್ಟಬೇಡಿ. 200 ಯೂನಿಟ್ ಮೇಲೆ ಎಷ್ಟು ಯೂನಿಟ್ ಬಳಸುತ್ತಿರಾ ಹೆಚ್ಚುವರಿಗೆ ಮಾತ್ರ ಕಟ್ಟಿ. ಕಂಡೀಷನ್ ಹಾಕಿದರೆ ಜೂನ್ 1 ರಿಂದ ಹೋರಾಟ ಮಾಡುತ್ತೇವೆ ಎಂದು ಕಿಡಿಕಾರಿದರು.


ಈ ಫಲಿತಾಂಶ ಲೋಕಸಭಾ ಚುನಾವಣೆ ಮೇಲೆ ಪ್ರಭಾವ ಬೀರಲ್ಲ. ದೇಶಕ್ಕೆ ಎಂತಹ ನಾಯಕ ಬೇಕು ಅನ್ನೋದು ಕನ್ನಡಿಗರಿಗೆ ಗೊತ್ತು. ಆದಾಯದ ಆಧಾರದ ಮೇಲೆ ಖರ್ಚು ಮಾಡಬೇಕು ಎಂಬ ನಿಯಮ ವಿಧಾನಸಭೆಯಲ್ಲಿ ಇದೆ. ವಿತ್ತಿಯ ಹೊಣೆಗಾರಿಕೆ ಬಿಲ್ ಕರ್ನಾಟಕದಲ್ಲಿ ಪಾಸ್ ಆಗಿದೆ. ಮುಂದಿನ ತಲೆಮಾರನ್ನು ಅಪಾಯಕ್ಕೆ ತಳ್ಳಬೇಡಿ ಎಂದರು.

Join Whatsapp
Exit mobile version