ಇನ್ನುಮುಂದೆ ಅತಿಥಿ ಉಪನ್ಯಾಸಕ ಎಂಬ ಪರಿಕಲ್ಪನೆಯೇ ಇಲ್ಲ : ಡಿಸಿಎಂ ಅಶ್ವಥ್ ನಾರಾಯಣ್

Prasthutha|

- Advertisement -

ಮೈಸೂರು: ಕೆ ಆರ್ ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ಭೇಟಿನೀಡಿದ ಉನ್ನತ ಶಿಕ್ಶಣ ಸಚಿವರು, ಉಪ ಮುಖ್ಯಮಂತ್ರಿಯೂ ಆದ ಡಾ ಸಿ ಎನ್ ಅಶ್ವಥ್ ನಾರಾಯಣ್ ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ಕಾಪಾಡಲು ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಹಿನ್ನಲೆಯಲ್ಲಿ ಇನ್ನುಮುಂದೆ ಅತಿಥಿ ಉಪನ್ಯಾಸಕರು ಎಂಬ ಪರಿಕಲ್ಪನೆಯೇ ಇಲ್ಲ ಎಂದು ಸುದ್ದಿಗಾರರೊಂದಿಗೆ ಹೇಳಿದರು
ಉತ್ತಮ ಕಲಿಕೆ, ಬೋಧನೆಯು ಶಿಕ್ಷಣ ನೀತಿಯ ಆಶಯ. ಅದಕ್ಕೆ ತಕ್ಕಂತೆ ಗುಣಮಟ್ಟದ ಬೋಧಕರನ್ನು ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ.ಆ ನಿಟ್ಟಿನಲ್ಲಿ 8000 ಖಾಯಂ ಉಪನ್ಯಾಸಕರ ನೇಮಕಾತಿಗೆ ಅನುಮತಿ ನೀಡುವಂತೆ ಮುಖ್ಯಮಂತ್ರಿಗೆ ಬೇಡಿಕೆ ಸಲ್ಲಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆಯಲ್ಲಿ ಮೂಲಸೌಕರ್ಯ ಸೇರಿದಂತೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಅನುದಾನ ಸಾಲುತ್ತಿಲ್ಲ. ಇದುವರೆಗೂ ಒಟ್ಟಾರೆ ಬಜೆಟ್ನನಲ್ಲಿ ಶೇ.2ರಷ್ಟು ಅನುದಾನವನ್ನಷ್ಟೇ ಉನ್ನತ ಶಿಕ್ಷಣಕ್ಕೆ ನೀಡಲಾಗುತ್ತಿತ್ತು. ಈ ಪ್ರಮಾಣವನ್ನು ಶೇ.3.5ಕ್ಕೆ ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿಗಳನ್ನು ಕೋರಲಾಗಿದೆ ಎಂದು ಡಿಸಿಎಂ ಹೇಳಿದರು.

ಕಳೆದ ಶೈಕ್ಷಣಿಕ ವರ್ಷದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅತಿಥಿ ಉಪನ್ಯಾಸಕರನ್ನು ಈ ವರ್ಷ ಮುಂದುವರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

Join Whatsapp