Home ಟಾಪ್ ಸುದ್ದಿಗಳು ಕಾಶಿ ಯಾತ್ರೆಗೆ ಮಾರ್ಗಸೂಚಿ ಪ್ರಕಟ: ರಾಜ್ಯದ 30 ಸಾವಿರ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂ.ಸಹಾಯಧನ

ಕಾಶಿ ಯಾತ್ರೆಗೆ ಮಾರ್ಗಸೂಚಿ ಪ್ರಕಟ: ರಾಜ್ಯದ 30 ಸಾವಿರ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂ.ಸಹಾಯಧನ

ಬೆಂಗಳೂರು: ಕೇಂದ್ರ ಸರ್ಕಾರದ ಕಾಶಿ ಕಾರೀಡಾರ್ ಗೆ ರಾಜ್ಯದ ಜನರು ಭೇಟಿ ನೀಡುವುದನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ “ಕಾಶಿ ಯಾತ್ರೆ” ಗೆ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಸರಕಾರದಿಂದ ಅಂತಿಮ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಇಂದು ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು, ಭವ್ಯ ಕಾಶಿ – ದಿವ್ಯ ಕಾಶಿಯ ಭವ್ಯತೆಯನ್ನು ಪ್ರಧಾನಿ ನರೇಂದ್ರ ಮೋದಿಯವರ ಮುತುವರ್ಜಿಯಿಂದ ಅಭಿವೃದ್ಧಿಗೊಳಿಸಲಾಗಿದೆ. ಈ ಭವ್ಯ ಕಾಶಿಯ ಯಾತ್ರೆ ಬಹಳಷ್ಟು ಜನರ ಜೀವನದ ಅಭಿಲಾಷೆಯಾಗಿರುತ್ತದೆ. ಈ ಯಾತ್ರೆಯ ಅಭಿಲಾಷೆಯನ್ನು ಪೂರೈಸುವ ನಿಟ್ಟಿನಲ್ಲಿ ರಾಜ್ಯ ಸರಕಾರದಿಂದ ಯೋಜನೆಯನ್ನು ಪ್ರಾರಂಭಿಸಬೇಕು ಎನ್ನುವುದು ನನ್ನ ಗುರಿಯಾಗಿತ್ತು. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಆಯವ್ಯಯದಲ್ಲಿ ಘೋಷಣೆ ಮಾಡಿದ್ದರು.


ರಾಜ್ಯದ 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂಪಾಯಿಗಳಂತೆ ಸಹಾಯಧನ ನೀಡುವ ಯೋಜನೆಗೆ ಮಾರ್ಗಸೂಚಿಗಳನ್ನು ಇಂದು ಅಂತಿಮಗೊಳಿಸಿದ್ದು, ಸರಕಾರದಿಂದ ಅಧಿಕೃತವಾಗಿ ಆದೇಶ ಹೊರಡಿಸಲಾಗಿದೆ. ಏಪ್ರಿಲ್ 1, 2022 ಕ್ಕೆ ಪೂರ್ವಾನ್ವಯವಾಗುವಂತೆ ಈ ಆದೇಶವನ್ನು ಹೊರಡಿಸಲಾಗಿದ್ದು, ಸೂಕ್ತ ದಾಖಲಾತಿಗಳೊಂದಿಗೆ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮಾನ್ಯ ಸಚಿವರು ಹೇಳಿದ್ದಾರೆ.


ಮಾರ್ಗಸೂಚಿಯ ಅಂಶಗಳು:

  1. ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಂಡ ಅರ್ಹ ಯಾತ್ರಾರ್ಥಿಗಳಿಗೆ ತಲಾ ರೂ 5,೦೦೦/-ಗಳನ್ನು ಸಹಾಯ ಧನವಾಗಿ ನೀಡಲಾಗುವುದು.
  2. ಕರ್ನಾಟಕದ ಖಾಯಂ ನಿವಾಸಿಗಳು ಮಾತ್ರ ಈ ಧನ ಸಹಾಯ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಈ ಉದ್ದೇಶಕ್ಕಾಗಿ ಕೆಳಕಂಡ ಯಾವುದಾದರೂ ಒಂದು ದಾಖಲೆಗಳನ್ನು ಕಡ್ಡಾಯವಾಗಿ ಒದಗಿಸತಕ್ಕದ್ದು.
    • ಕರ್ನಾಟಕ ರಾಜ್ಯ ಚುನಾವಣಾ ಆಯೋಗ ನೀಡಿರುವ “ಗುರುತಿನ ಚೀಟಿ’ ಅಥವಾ
    • ಆಧಾರ್ ಗುರುತಿನ ಚೀಟಿ ಅಥವಾ
    • ರೇಷನ್ ಕಾರ್ಡ್
  3. ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ ಏಪ್ರಿಲ್ 1 ಕ್ಕೆ 18 ವರ್ಷಗಳ ಮೇಲ್ಪಟ್ಟವರಾಗಿರತಕ್ಕದ್ದು, 18 ವಯಸ್ಸಿನ ಕೆಳಗಿನವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಹಾಜರುಪಡಿಸಬೇಕು.
Join Whatsapp
Exit mobile version