ಸೂರತ್: ಆದಿವಾಸಿ ಸಮುದಾಯಕ್ಕೆ ಸೇರಿದ 37 ಕುಟುಂಬದ ಸುಮಾರು 100 ಮಂದಿ ಇಸ್ಲಾಮ್ ಧರ್ಮವನ್ನು ಸ್ವೀಕರಿಸಿದ ಹಿನ್ನೆಲೆಯಲ್ಲಿ ಗುಜರಾತ್ ಪೊಲೀಸರು 9 ಮುಸ್ಲಿಮರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.
ಭರೂಚ್ ಜಿಲ್ಲೆಯ ಅಮೋದ್ ಎಂಬಲ್ಲಿನ ಕಂಕರಿಯಾ ಗ್ರಾಮದ ನಿವಾಸಿಗಳು ಹಿಂದೂ ಧರ್ಮವನ್ನು ತೊರೆದು ಇಸ್ಲಾಮ್ ಧರ್ಮವನ್ನು ಸ್ವೀಕರಿಸಿದ್ದಕ್ಕಾಗಿ ಮುಸ್ಲಿಮರನ್ನು ಗುರಿಯಾಗಿಸಿದ್ದಾರೆ ಎಂದು ಹೇಳಲಾಗಿದೆ.
ಸ್ಥಳೀಯ ಒಂಬತ್ತು ಮಂದಿ ವಿದೇಶದಲ್ಲಿ ಸಂಗ್ರಹಿಸಿದ ಹಣವನ್ನು ಬಳಸಿ ಬುಡಕಟ್ಟು ಜನಾಂಗದವರನ್ನು ಇಸ್ಲಾಮ್ ಧರ್ಮಕ್ಕೆ ಮತಾಂತರಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.
ಕೆಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಧಾರ್ಮಿಕ ಮತಾಂತರವನ್ನು ತಡೆಯುವ ನೆಪದಲ್ಲಿ ಭಾರತೀಯ ಮುಸ್ಲಿಮರನ್ನು ಗುರಿಯಾಗಿಸಿ ನಿರಂತರ ದೌರ್ಜನ್ಯ ನಡೆಸುತ್ತಲೇ ಇದೆ.
ಆರೋಪಿಗಳ ವಿರುದ್ಧ ಧಾರ್ಮಿಕ ಸ್ವಾತಂತ್ರ್ಯ ತಿದ್ದುಪಡಿ ಕಾಯ್ದೆ ಸೆಕ್ಷನ್ 120 ಬಿ, 153 ಬಿ, 506 (2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.