ಗುಜರಾತ್’ನಲ್ಲಿ 17 ಮಂದಿ ಮುಸ್ಲಿಮರ ಹತ್ಯೆ ಪ್ರಕರಣ: 22 ಮಂದಿ ಆರೋಪಿಗಳ ಖುಲಾಸೆ

Prasthutha|

ಗೋಧ್ರಾ: ಇಬ್ಬರು ಮಕ್ಕಳು ಸೇರಿದಂತೆ 17 ಮಂದಿ ಮುಸ್ಲಿಮರನ್ನು ಬರ್ಬರವಾಗಿ ಹತ್ಯೆಗೈದಿದ್ದ ಗೋಧ್ರೋತ್ತರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 22 ಆರೋಪಿಗಳನ್ನು ಖುಲಾಸೆಗೊಳಿಸಿ ಗುಜರಾತ್‌’ನ ನ್ಯಾಯಾಲಯ ತೀರ್ಪು ನೀಡಿದೆ.

2002ರ ಗೋಧ್ರಾ ಹತ್ಯಾಕಾಂಡದ ನಂತರ ನಡೆದ ಕೋಮುಗಲಭೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ 17 ಮಂದಿ ಮುಸ್ಲಿಮರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಬಳಿಕ ಸಾಕ್ಷ್ಯವನ್ನು ನಾಶಪಡಿಸಲು ದೇಹಗಳನ್ನು ಸುಡಲಾಗಿತ್ತು.

- Advertisement -

ಪ್ರಕರಣದಲ್ಲಿ ವಿಚಾರಣೆ ನಡೆಸಿರುವ ಗುಜರಾತ್‌’ನ ಪಂಚಮಹಲ್ ಜಿಲ್ಲೆಯ ಹಲೋಲ್ ಪಟ್ಟಣದ ನ್ಯಾಯಾಲಯವು, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ 22 ಆರೋಪಿಗಳನ್ನು ದೋಷ ಮುಕ್ತಗೊಳಿಸಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ಷ ತ್ರಿವೇದಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಈ ಪೈಕಿ ಎಂಟು ಮಂದಿ ವಿಚಾರಣೆಯ ಅವಧಿಯಲ್ಲಿ ಮೃತಪಟ್ಟಿದ್ದರು.

- Advertisement -