ಗುಜರಾತ್: ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿ ಕಾರಿನ ಬಾನೆಟ್ ಮೇಲೆ ಎಳೆದೊಯ್ದ ‘ಆಪ್’ ಮುಖಂಡ

Prasthutha|

ನವದೆಹಲಿ: ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿ, ಕಾನ್ಸಟೇಬಲನ್ನು ಕಾರಿನ ಬಾನೆಟ್ ಮೇಲೆ ಎಳೆದೊಯ್ದ ಪ್ರಕರಣಕ್ಕೆ ಸಂಬಂಧಿಸಿ ಗುಜರಾತ್ ಪೊಲೀಸರು ಎಎಪಿಯ ಯುವ ಘಟಕದ ನಾಯಕ ಯುವರಾಜ್ ಸಿನ್ಹಾ ಜಡೇಜಾರನ್ನು ಬಂಧಿಸಿದ್ದಾರೆ.

- Advertisement -

ಪೊಲೀಸರ ಮೇಲೆ ದರ್ಪ ತೋರಿದ ಆಪ್ ಮುಖಂಡನ ಮೇಲೆ ಐಪಿಸಿ ಸೆಕ್ಷನ್ 307 ರ ಅಡಿಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಪೊಲೀಸ್ ಸಿಬ್ಬಂದಿಯನ್ನು ಕಾರಿನ ಬಾನೆಟ್ ಮೇಲೆ ಎಳೆದೊಯ್ಯುವ ವೀಡಿಯೋ ವೈರಲ್ ಆಗಿದ್ದು, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಪೊಲೀಸ್ ಕಾನ್ಸ್ಟೇಬಲನ್ನು ಗುದ್ದುತ್ತಾ ಕಾರು ಚಲಾಯಿಸುವುದು ವೀಡಿಯೋದಲ್ಲಿ ಸೆರೆಯಾಗಿದೆ.

ಆಪ್ ನಾಯಕ ಮತ್ತು ಪೊಲೀಸ್ ಸಿಬ್ಬಂದಿಯ ನಡುವೆ ಕೆಲಕಾಲ ವಾಗ್ವಾದ ನಡೆದಿತ್ತು ಎನ್ನಲಾಗಿದೆ, ಬಳಿಕ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ಪರಿಣಾಮ ಸ್ಥಳದಲ್ಲಿ ಹೆಚ್ಚಿನ ಪೊಲೀಸರು ಜಮಾವಣೆಗೊಂಡಿದ್ದರಿಂದ ಜಡೇಜಾ ಘಟನಾ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಈ ವೇಳೆ ಸಿಬ್ಬಂದಿ ತಡೆಯಲೆತ್ನಿಸಿದಾಗ ಮುಖಂಡ ಕಾರನ್ನು ನಿಲ್ಲಿಸದೆ ದರ್ಪ ತೋರಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Join Whatsapp
Exit mobile version