ಗುಜರಾತ್‌ ಚುನಾವಣೆ|  ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್‌

Prasthutha|

ಹೊಸದಿಲ್ಲಿ:  ಗುಜರಾತ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

- Advertisement -

ಗುರುವಾರ ತಡರಾತ್ರಿ ಕಾಂಗ್ರೆಸ್ ತನ್ನ 46 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪಕ್ಷವು ಇದುವರೆಗೆ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಸಂಖ್ಯೆ 89ಕ್ಕೆ ಏರಿದೆ. ಕಳೆದ ಶುಕ್ರವಾರ ಕಾಂಗ್ರೆಸ್ 43 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.

182 ಕ್ಷೇತ್ರಗಳಿಗೆ ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಡಿಸೆಂಬರ್ 8 ರಂದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

Join Whatsapp