ಅಹಮದಾಬಾದ್: ಗುಜರಾತ್ ನ ವಡೋದರ ಲೋಕಸಭಾ ಕ್ಷೇತ್ರದ ಹಾಲಿ ಬಿಜೆಪಿ ಸಂಸದೆ ಹಾಗೂ ಮುಂಬರುವ ಚುನಾವಣೆಗೆ ಟಿಕೆಟ್ ಪಡೆದುಕೊಂಡಿದ್ದ ರಂಜನ್ ಭಟ್, ಕಣದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ.
‘ನಾನು, ರಂಜನ್ ಬೆನ್ ಧನಂಜಯ ಭಟ್, 2024ರ ಲೋಕಸಭಾ ಚುನಾವಣೆಗೆ ವೈಯಕ್ತಿಕ ಕಾರಣಗಳಿಂದಾಗಿ ಸ್ಪರ್ಧಿಸದಿರಲು ಇಚ್ಛಿಸುವುದಿಲ್ಲ’ ಎಂದು ಎಕ್ಸ್ ತಾಣದಲ್ಲಿ ಬರೆದುಕೊಂಡಿದ್ದಾರೆ.