Home ಟಾಪ್ ಸುದ್ದಿಗಳು ಗುಜರಾತ್ ಸೇತುವೆ ಕುಸಿತ: PIL ವಿಚಾರಣೆಗೆ ಸುಪ್ರೀಂ ಸಮ್ಮತಿ

ಗುಜರಾತ್ ಸೇತುವೆ ಕುಸಿತ: PIL ವಿಚಾರಣೆಗೆ ಸುಪ್ರೀಂ ಸಮ್ಮತಿ

ನವದೆಹಲಿ: ಗುಜರಾತ್ ನ ಮೊರ್ಬಿ ಸೇತುವೆ ಕುಸಿತದ ದುರಂತಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಯ ವಿಚಾರಣೆಯನ್ನು ನವೆಂಬರ್ 14ರಂದು ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ನೇತೃತ್ವದ ಪೀಠದ ಮುಂದೆ ಅರ್ಜಿದಾರರ ಪರ ವಕೀಲ ವಿಶಾಲ್ ತಿವಾರಿ ಅವರು ಈ ಕುರಿತು ವಿಷಯವನ್ನು ಪ್ರಸ್ತಾಪಿಸಿದ್ದಾರೆ.

ಅಕ್ಟೋಬರ್ 30ರಂದು ನಡೆದ ಮೊರ್ಬಿ ಸೇತುವೆ ಕುಸಿತ ದುರಂತದಲ್ಲಿ 50 ಮಕ್ಕಳು ಮತ್ತು 35 ಮಕ್ಕಳು ಸೇರಿದಂತೆ ಒಟ್ಟು 141ಕ್ಕೂ ಅಧಿಕ ಜನರು ಸಾವನ್ನಪ್ಪಿದ ಘಟನೆಯನ್ನು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ನಿರ್ದೇಶಿಸುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲಾಗಿತ್ತು.

ಗುಜರಾತ್’ನ ಮೊರ್ಬಿ ಪಟ್ಟಣದ ಮಚ್ಚು ನದಿಯಲ್ಲಿ ತೂಗುಸೇತುವೆ ಕುಸಿತ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸೋಮವಾರ ಒಂಬತ್ತು ಮಂದಿಯನ್ನು ಬಂಧಿಸಿದ್ದರು.

Join Whatsapp
Exit mobile version