ಗುಜರಾತ್ | ಕೊಳವೆ ಬಾವಿಗೆ ಬಿದ್ದು ಮಗು ಮೃತ್ಯು

Prasthutha|

ಅಮ್ರೇಲಿ: 50 ಅಡಿ ಕೊಳವೆ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಗುಜರಾತ್ನ ಅಮ್ರೇಲಿ ಜಿಲ್ಲೆಯ ಸೂರಜ್ಪುರ ಗ್ರಾಮದಲ್ಲಿ ನಡೆದಿದೆ.

- Advertisement -


ಶುಕ್ರವಾರ ಮಧ್ಯಾಹ್ನ 12.30ರ ಹೊತ್ತಿಗೆ ಬಾಲಕಿ ಕೊಳವೆ ಬಾವಿಗೆ ಬಿದ್ದಿದ್ದಳು. 500 ಅಡಿಯಿದ್ದ ಕೊಳವೆ ಬಾವಿಯ 50 ಅಡಿ ಆಳದಲ್ಲಿ ಬಾಲಕಿ ಸಿಲುಕಿಕೊಂಡಿದ್ದಳು. ಮಾಹಿತಿ ತಿಳಿದು ಸ್ಥಳಕ್ಕಾಮಿಸಿದ ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿತ್ತು. ರಾತ್ರಿ 10.20ರ ಹೊತ್ತಿಗೆ ಎನ್ಡಿಆರ್ಎಫ್ ತಂಡ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಮುಂದುವರಿಸಿತ್ತು. 17 ಗಂಟೆಗಳ ಸುದೀರ್ಘ ರಕ್ಷಣಾ ಕಾರ್ಯಾಚರಣೆ ನಂತರ ಶನಿವಾರ ಮುಂಜಾನೆ 5 ಗಂಟೆಯ ಹೊತ್ತಿಗೆ ಬಾಲಕಿಯನ್ನು ಹೊರತೆಗೆಯಲಾಗಿತ್ತು. ಪ್ರಜ್ಞಾಹೀನಳಾಗಿದ್ದ ಆಕೆಯನ್ನು ಹತ್ತಿರ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಆಕೆ ಅದಾಗಲೇ ಮೃತಪಟ್ಟಿದ್ದಳು ಎಂದು ವೈದ್ಯರು ತಿಳಿಸಿದ್ದರು.

Join Whatsapp
Exit mobile version