Home ಟಾಪ್ ಸುದ್ದಿಗಳು ‘ಲವ್ ಜಿಹಾದ್’ ಬಗ್ಗೆ ಭಾಷಣ ಮಾಡುತ್ತಲೇ ಕುಸಿದು ಬಿದ್ದ ಗುಜರಾತ್ ಮುಖ್ಯಮಂತ್ರಿ!

‘ಲವ್ ಜಿಹಾದ್’ ಬಗ್ಗೆ ಭಾಷಣ ಮಾಡುತ್ತಲೇ ಕುಸಿದು ಬಿದ್ದ ಗುಜರಾತ್ ಮುಖ್ಯಮಂತ್ರಿ!

ಅಹಮದಾಬಾದ್ : ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದಾಗಲೇ, ಗುಜರಾತ್ ಮುಖ್ಯಮಂತ್ರಿ ವಿಜಯ ರುಪಾನಿವರು ಕುಸಿದು ಬಿದ್ದ ಘಟನೆ ನಡೆದಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ವಿಜಯ ರುಪಾನಿ ಅವರು ಭಾನುವಾರ ಅಹಮದಾಬಾದ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ರಾಜ್ಯದಲ್ಲಿ ಸರಕಾರದ ಯೋಜನೆಗಳ ಕುರಿತಾಗಿ ಭಾಷಣ ಮಾಡುತ್ತಿದ್ದರು. ನಮ್ಮ ಸರಕಾರ ‘ಲವ್ ಜಿಹಾದ್’ ವಿರುದ್ಧ ಕಾನೂನು ತರಲು ಸಿದ್ಧತೆ ನಡೆಸಿಕೊಳ್ಳುತ್ತಿದೆ ಎಂದು ಹೇಳುತ್ತಿದ್ದರು. ಹಾಗೆ ಹೇಳುತ್ತಲೇ ಮಾತು ನಿಲ್ಲಿಸಿ ಅವರು ಅಲ್ಲಿಯೇ ಕುಸಿಯಲಾರಂಭಿಸಿದ್ದಾರೆ. ಅವರ ಅಕ್ಕಪಕ್ಕದಲ್ಲಿದ್ದವರು ತಕ್ಷಣ ಅವರನ್ನು ಹಿಡಿದುಕೊಂಡಿದ್ದಾರೆ. ಅವರಿಗೆ ಬಿಪಿ ಮತ್ತು ಶುಗರ್ ಲೆವೆಲ್ ಕಡಿಮೆಯಾಗಿದ್ದರಿಂದಾಗಿ ಈ ರೀತಿ ಆಗಿರುವುದಾಗಿ ತಿಳಿಸಲಾಗಿದೆ.

ರುಪಾನಿ ಅವರನ್ನು ಅಹಮದಾಬಾದ್ ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದ ಎಂದು ವೈದ್ಯರು ತಿಳಿಸಿದ್ದಾರೆ.  

Join Whatsapp
Exit mobile version