ಗುಜರಾತ್: ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡ ಕಾಂಗ್ರೆಸ್, ಎನ್.ಸಿ.ಪಿ

Prasthutha|

ಅಹಮದಾಬಾದ್: ಮುಂದಿನ ತಿಂಗಳ ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಎನ್.ಸಿ.ಪಿ. ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದೆ. ಶರದ್ ಪವಾರ್ ನೇತೃತ್ವದ ಎನ್.ಸಿ.ಪಿ. 182 ಸ್ಥಾನಗಳ ಪೈಕಿ ಮೂರರಲ್ಲಿ ಸ್ಪರ್ಧಿಸಲಿದೆ ಎಂದು ಮೂಲಗಳು ತಿಳಿಸಿವೆ.

- Advertisement -

2017ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಿದ್ದು, ಕಂಧಲ್ ಜಡೇಜಾ ಅವರು ಎನ್.ಸಿ.ಪಿ.ಯಲ್ಲಿ ಗೆದ್ದ ಏಕೈಕ ಶಾಸಕರಾಗಿದ್ದರು. ಅವರು ಪೋರ್ ಬಂದರ್ ಜಿಲ್ಲೆಯ ಕುಟಿಯಾದ ಅಸೆಂಬ್ಲಿಯಿಂದ ಸ್ಪರ್ಧಿಸಿದ್ದರು.

ಮೈತ್ರಿಯ ಕುರಿತು ಪ್ರತಿಕ್ರಿಯಿಸಿದ ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್ ಠಾಕೂರ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಎನ್.ಸಿ.ಪಿ.ಯೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಹೋರಾಡಲಿದೆ. ಮೈತ್ರಿಯ ಭಾಗವಾಗಿ ಎನ್.ಸಿ.ಪಿ. ಮೂರು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಈ ಮೂರು ಕ್ಷೇತ್ರಗಳು ಆಡಳಿತಾರೂಢ ಬಿಜೆಪಿ ಕೈಯಲ್ಲಿದೆ ಎಂದು ತಿಳಿಸಿದರು.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಎನ್‌ಸಿಪಿ ರಾಜ್ಯ ಅಧ್ಯಕ್ಷ ಜಯಂತ್ ಪಟೇಲ್ ಬೋಸ್ಕಿ, ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಎನ್‌ಸಿಪಿ ಪಕ್ಷವು ಕಾಂಗ್ರೆಸ್‌ಗೆ ಬೆಂಬಲ ನೀಡಲಿದೆ. ನಾವು ಈ ಮೂರು ಸ್ಥಾನಗಳಲ್ಲಿ ಪ್ರಾಮಾಣಿಕತೆಯಿಂದ ಸ್ಪರ್ಧಿಸುತ್ತೇವೆ. ಕಾಂಗ್ರೆಸ್ ನಮ್ಮ ಮೇಲೆ ಇಟ್ಟಿರುವ ನಂಬಿಕೆಗೆ ನಾನು ಕೃತಜ್ಞನಾಗಿದ್ದೇನೆ. ಎನ್‌ಸಿಪಿಯ ಪ್ರತಿಷ್ಠೆಗೆ ಧಕ್ಕೆ ತರುವಂತಹ ಯಾವುದನ್ನೂ ನಾವು ಮಾಡುವುದಿಲ್ಲ ಎಂದು ತಿಳಿಸಿದರು.



Join Whatsapp