ಅಹಮದಾಬಾದ್: ಮತದಾರರಿಗೆ ಹಂಚಲು ಮದ್ಯದ ಬಾಟಲಿಗಳನ್ನು ಸಾಗಾಟ ಮಾಡುವಾಗ ಗುಜರಾತ್‌ನ ಅರಾವಳಿ ಜಿಲ್ಲೆಯ ಬಿಜೆಪಿ ಅಧ್ಯಕ್ಷ ಸಿಕ್ಕಿ ಬಿದ್ದಿದ್ದಾನೆ. ಈ ಕುರಿತ ವೀಡಿಯೋ ವ್ಯಾಪಕ ವೈರಲ್ ಆಗಿದೆ.
ಗುಜರಾತ್ ವಿಧಾನಸಭೆ ಚುನಾವಣೆಯ ಅಂತಿಮ ಹಂತದ ಮತದಾನದ ವೇಳೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಅರಾವಳಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಹಿರಂಗವಾಗಿ ಮದ್ಯದ ಪೆಟ್ಟಿಗೆಗಳನ್ನು ಸಾಗಿಸುತ್ತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ಮೌನವಾಗಿದೆ. ಇದಕ್ಕೆ ಚುನಾವಣಾ ಆಯೋಗ ಏನಾದರೂ ವಿವರಣೆ ಕೊಡುತ್ತದೆಯೇ ಎಂದು ಟ್ವಿಟ್ಟರ್ ಬಳಕೆದಾರರೊಬ್ಬರು ವೀಡಿಯೋ ಪೋಸ್ಟ್ ಮಾಡಿದ್ದಾರೆ.
ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಚುನಾವಣಾ ಆಯೋಗ, ಅರಾವಳಿ ಜಿಲ್ಲೆಯ ಎಸ್ಪಿ ಈ ಪ್ರಕರಣ ಕುರಿತು ತನಿಖೆ ನಡೆಸಲಿದ್ದಾರೆ ಎಂದು ಹೇಳಿದೆ.
ಬಿಜೆಪಿ ನಾಯಕನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದ್ದು, ವಾಹನದಲ್ಲಿದ್ದ ಸುಮಾರು ₹87,600 ಮೌಲ್ಯದ IMFL ಬಾಟಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.