ಗುಜರಾತ್ ಚುನಾವಣೆ | ಕಾಂಗ್ರೆಸ್ಸಿನ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಶಶಿ ತರೂರ್ ಔಟ್

Prasthutha|

- Advertisement -

ಗಾಂಧಿನಗರ : ಗುಜರಾತ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ಸಿನ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಹಿರಿಯ ನಾಯಕ ಶಶಿ ತರೂರ್ ರನ್ನು ಕೈಬಿಡಲಾಗಿದೆ.

ಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಖರ್ಗೆ ವಿರುದ್ಧ ಸ್ಪರ್ಧಿಸಿ ಸೋತಿದ್ದ ಶಶಿ ತರೂರ್ ಹೆಸರನ್ನು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಅವರನ್ನು ಒಳಗೊಂಡ 40 ಸ್ಟಾರ್‌ ಪ್ರಚಾರಕರ ಪಟ್ಟಿಯಿಂದ ಕೈಬಿಡಲಾಗಿದೆ.

- Advertisement -

ಈ ಹಿನ್ನೆಲೆಯಲ್ಲಿ ಪಕ್ಷದ ವಿದ್ಯಾರ್ಥಿ ಸಂಘಟನೆ ನ್ಯಾಷನಲ್‌ ಸ್ಟೂಡೆಂಟ್ಸ್‌ ಯೂನಿಯನ್‌ ಆಫ್‌ ಇಂಡಿಯಾ (ಎನ್‌ಎಸ್‌ಯುಐ) ಆಹ್ವಾನಿಸಿದ್ದ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ತರೂರ್‌ ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Join Whatsapp
Exit mobile version