ಗುಜರಾತ್ ಚುನಾವಣೆ: ಜಿಗ್ನೇಶ್ ಮೇವಾನಿ ಭರ್ಜರಿ ಗೆಲುವು

Prasthutha|

ವಡ್ಗಾಂ: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ್ದರೂ ಪಕ್ಷದ ಅಭ್ಯರ್ಥಿ, ದಲಿತ ನಾಯಕ ಜಿಗ್ನೇಶ್ ಮೇವಾನಿ ವಡ್ಗಾಂ ಕ್ಷೇತ್ರದಿಂದ ಎರಡನೇ ಬಾರಿ ಗೆಲುವು ಸಾಧಿಸಿದ್ದಾರೆ.

ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಮಣಿಭಾಯ್ ವಘೇಲಾ ವಿರುದ್ಧ ಸುಮಾರು 2500 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ.

- Advertisement -


ಕಳೆದ ಬಾರಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದ ಯುವ ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ ಈ ಬಾರಿ ಕಾಂಗ್ರೆಸ್ ಪಕ್ಷದ ಟಿಕೆಟ್ ಪಡೆದು ಸ್ಪರ್ಧಿಸಿದ್ದಾರೆ. ಆರಂಭದಲ್ಲಿ ಹಿನ್ನಡೆ ಅನುಭವಿಸಿದ್ದ ಅವರು ಕೊನೆಯ ಸುತ್ತಿನ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿ ಜಯ ತಮ್ಮದಾಗಿಸಿಕೊಂಡಿದ್ದಾರೆ.

- Advertisement -