ಗುಜರಾತ್ ಚುನಾವಣೆ: ಮೊದಲ ಹಂತದ ಪ್ರಚಾರಕ್ಕೆ ಇಂದು ಕೊನೆಯ ದಿನ

Prasthutha|

ಅಹಮದಾಬಾದ್ : ಗುಜರಾತ್ ನ ಒಟ್ಟು 182 ಸ್ಥಾನಗಳ ಪೈಕಿ 89 ಸ್ಥಾನಗಳಲ್ಲಿ ಮೊದಲ ಹಂತದ ಚುನಾವಣೆಯ ಪ್ರಚಾರವು ಮಂಗಳವಾರ ಕೊನೆಗೊಳ್ಳಲಿದೆ. ಮೊದಲ ಹಂತದ ಚುನಾವಣೆ ಡಿಸೆಂಬರ್ 1 ರಂದು ನಡೆಯಲಿದೆ. ಉಳಿದ 93 ಸ್ಥಾನಗಳಿಗೆ ಡಿಸೆಂಬರ್ 5 ರಂದು ಮತದಾನ ನಡೆಯಲಿದೆ.

- Advertisement -

ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಮೊದಲ ಹಂತದಲ್ಲಿ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕ್ರಮವಾಗಿ ಭಾವನಗರ ಮತ್ತು ಗಾಂಧಿಧಾಮ್ (ಕಛ್ ಜಿಲ್ಲೆ) ನಲ್ಲಿ ಮಂಗಳವಾರ ಪ್ರಚಾರ ನಡೆಸಲಿದ್ದಾರೆ.

ಡಿಸೆಂಬರ್ 5 ರಂದು ನಡೆಯಲಿರುವ ಎರಡನೇ ಹಂತದ ಚುನಾವಣೆಯಲ್ಲಿ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಪರ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ  ಆದಿತ್ಯನಾಥ್ ಪ್ರಚಾರ ನಡೆಸಲಿದ್ದಾರೆ.

- Advertisement -

ಮೊದಲ ಹಂತದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಮಂತ್ರಿ ಮುಖ ಇಸುದನ್ ಗಾಧ್ವಿ ಅವರು ದೇವಭೂಮಿ ದ್ವಾರಕಾ ಜಿಲ್ಲೆಯ ಖಂಭಾಲಿಯಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಗುಜರಾತ್ ಮಾಜಿ ಸಚಿವ ಪುರುಷೋತ್ತಮ್ ಸೋಲಂಕಿ, ಆರು ಬಾರಿ ಶಾಸಕರಾಗಿರುವ ಕುನ್ವರ್ಜಿ ಬವಾಲಿಯಾ, ಮೊರ್ಬಿ ‘ಹೀರೋ’ ಕಾಂತಿಲಾಲ್ ಅಮೃತಾ, ಭಾರತೀಯ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಮತ್ತು ಗುಜರಾತ್ ಎಎಪಿ ಅಧ್ಯಕ್ಷ ಗೋಪಾಲ್ ಇಟಾಲಿಯಾ ಕೂಡ ಮೊದಲ ಹಂತದ ರಾಜ್ಯ ವಿಧಾನಸಭಾ ಚುನಾವಣೆಗೆ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳಲ್ಲಿ ಸೇರಿದ್ದಾರೆ.



Join Whatsapp